ಬೆಂಗಳೂರು:ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾಗಲು ಡಾ.ಕೆ ಸುಧಾಕರ್ ಅವರು ಅಗತ್ಯ ಅರ್ಹತೆ ಹೊಂದಿರುವ ಬಗ್ಗೆ ದಾಖಲೆಗಳನ್ನ ನ್ಯಾಯಲಯಕ್ಕೆ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶ ನೀಡಿದೆ.
ಮಾಲಿನ್ಯ ನಿಯಂತ್ರಣ ಮಂಡಳಿಗೆ ಸುಧಾಕರ್ ನೇಮಕ: ಅರ್ಹತೆಯ ದಾಖಲೆ ನೀಡಿ ಎಂದ ಹೈಕೋರ್ಟ್ - ಸಾರ್ವಜನಿಕ ಹಿತಾಶಕ್ತಿ ಅರ್ಜಿ ವಿಚಾರಣೆ
ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಗೆ ಸುಧಾಕರ್ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಿರುವುದನ್ನು ಪ್ರಶ್ನಿಸಿ ಆಂಜನೇಯ ರೆಡ್ಡಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಶಕ್ತಿ ಅರ್ಜಿ ವಿಚಾರಣೆ ವೇಳೆ ಈ ಆದೇಶ ಹೊರಡಿಸಲಾಗಿದೆ.
ಪರಿಸರಮಾಲಿನ್ಯ ನಿಯಂತ್ರಣ ಮಂಡಳಿಗೆ ಸುಧಾಕರ್ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡುರುವುದನ್ನು ಪ್ರಶ್ನಿಸಿ ಆಂಜನೇಯ ರೆಡ್ಡಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಶಕ್ತಿ ಅರ್ಜಿ ವಿಚಾರಣೆ ವೇಳೆ ಈ ಆದೇಶ ನೀಡಿದೆ.
ಅರ್ಜಿದಾರರ ಪರ ನ್ಯಾಯಲಯದಲ್ಲಿ ವಾದ ಮಂಡಿಸಿದ ವಕೀಲರು ಸುಧಾಕರ್ ಅವರಿಗೆ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಸ್ಥಾನದ ಯಾವುದೇ ಅನುಭವ ಮತ್ತು ಜ್ಞಾನ ಇಲ್ಲ. ಅವರನ್ನ ನೇಮಕ ಮಾಡುವಾಗ ಯಾವುದೇ ದಾಖಲೆಗಳ ಪರಿಶೀಲನೆಯನ್ನ ಸರ್ಕಾರ ನಡೆಸಿಲ್ಲ ಎಂದು ಆರೋಪಿಸಿದ್ದಾರೆ.
ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಆಗುವವರು ಪರಿಸರ ಮಾಲಿನ್ಯ ನಿಯಂತ್ರಣದಲ್ಲಿ ವಿಜ್ಞಾನಿಗಳು, ಸಂಶೋಧನಾ ಸಂಸ್ಥೆ ಕೆಲಸ ಮಾಡಿದ ಅನುಭವ ಹೊಂದಿರಬೇಕು ಎಂದು ತಿಳಿಸಿದ್ದಾರೆ.