ನೂತನ ಸಚಿವರಿಗೆ ಗುರುವಾರ ಖಾತೆ ಹಂಚಿಕೆ: ಸಿಎಂ ಯಡಿಯೂರಪ್ಪ - ಬಿ.ಎಸ್.ಯಡಿಯೂರಪ್ಪ
17:53 January 19
ನಾಳೆ ಎಲ್ಲರ ಜೊತೆ ಸಮಾಲೋಚನೆ ನಡೆಸುತ್ತೇನೆ. ಅದರಲ್ಲೂ ಹಿರಿಯ ಸಚಿವರೊಂದಿಗೆ ಚರ್ಚೆ ನಡೆಸುತ್ತೇನೆ. ನಂತರ ಗುರುವಾರ ಖಾತೆ ಹಂಚಿಕೆ ಪಟ್ಟಿ ಪ್ರಕಟಿಸುತ್ತೇನೆ ಎಂದು ಸಿಎಂ ಬಿಎಸ್ವೈ ತಿಳಿಸಿದ್ದಾರೆ.
ಬೆಂಗಳೂರು: ನೂತನ ಸಚಿವರಿಗೆ ಗುರುವಾರ ಖಾತೆಗಳ ಹಂಚಿಕೆ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ನಾಳೆ ಎಲ್ಲರ ಜೊತೆ ಸಮಾಲೋಚನೆ ನಡೆಸುತ್ತೇನೆ. ಅದರಲ್ಲೂ ಹಿರಿಯ ಸಚಿವರೊಂದಿಗೆ ಚರ್ಚೆ ನಡೆಸುತ್ತೇನೆ. ನಂತರ ಖಾತೆ ಹಂಚಿಕೆ ಪಟ್ಟಿ ಪ್ರಕಟಿಸುತ್ತೇನೆ ಎಂದರು.
ರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಾಚಾರ್ಯ ದೆಹಲಿಗೆ ಹೋದ ಬಗ್ಗೆ ಮಾಹಿತಿ ಇದೆ. ಅವರು ದೂರವಾಣಿ ಮೂಲಕ ನನ್ನ ಜೊತೆ ಮಾತನಾಡಿದ್ದಾರೆ. ಅವರನ್ನೂ ಕರೆಸಿ ಮಾತುಕತೆ ನಡೆಸುತ್ತೇನೆ ಎಂದರು.