ಬೆಂಗಳೂರು:ವಿಕಾಸಸೌಧದ ಮಹಿಳಾ ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಸೋಂಕು ನಿವಾರಕ ದ್ರಾವಣವನ್ನು ಇಂದು ಸಂಜೆ ಸಿಂಪಡಿಸಲಾಗಿದೆ.
ವಿಕಾಸಸೌಧ ಸಿಬ್ಬಂದಿಗೆ ಕೊರೊನಾ: ಸೋಂಕು ನಿವಾರಕ ದ್ರಾವಣ ಸಿಂಪಡಣೆ - coronavirus latest news
ಮಹಿಳಾ ಸಿಬ್ಬಂದಿಯೊಬ್ಬರಲ್ಲಿ ಸೋಂಕು ಕಾಣಿಸಿಕೊಂಡ ಹಿನ್ನೆಲೆ ವಿಕಾಸಸೌಧದ ಎಲ್ಲಾ ಕೊಠಡಿಗಳಿಗೂ ವೈರಾಣು ನಿವಾರಣಾ ದ್ರಾವಣವನ್ನು ಸಿಂಪಡಿಸಲಾಯಿತು.
ವಿಕಾಸಸೌಧದ ನೆಲ ಮಹಡಿಯ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮಹಿಳಾ ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ಬಂದಿತ್ತು. ಮೂರು ದಿನಗಳ ಹಿಂದೆ ಈ ಪ್ರಕರಣ ಬೆಳಕಿಗೆ ಬಂದಿತ್ತು. ಇದರಿಂದ ಸಚಿವಾಲಯದ ಸಿಬ್ಬಂದಿ, ಪೊಲೀಸರು ಆತಂಕಗೊಂಡಿದ್ದರು. ಸೋಂಕಿತ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದೀಗ ವಿಕಾಸಸೌಧದ ನಾಲ್ಕು ದ್ವಾರಗಳು ಹಾಗೂ ಮಹಿಳಾ ಸಿಬ್ಬಂದಿ ಕೆಲಸ ಮಾಡುತ್ತಿದ್ದ ಕಚೇರಿಗೆ ಸೋಂಕು ನಿವಾರಕ ದ್ರಾವಣವನ್ನು ಬಿಬಿಎಂಪಿ ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿ ಸಿಂಪಡಿಸಿದ್ದಾರೆ. ವಿಕಾಸಸೌಧದಲ್ಲಿ ಮಹಿಳಾ ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ಬಂದ ನಂತರ ವಿಧಾನಸೌಧ ಹಾಗೂ ವಿಕಾಸಸೌಧದಲ್ಲಿ ಭದ್ರತೆ, ತಪಾಸಣೆ ಮತ್ತಷ್ಟು ಹೆಚ್ಚಿಸಲಾಗಿದೆ.