ಆನೇಕಲ್:ಕಳೆದ ರಾತ್ರಿ ಪಾದರಾಯನಪುರ ಪ್ರಕರಣದ ಆರೋಪಿಯನ್ನು ವಶಕ್ಕೆ ಪಡೆದು ಪರೀಕ್ಷೆ ನಡೆಸಿದಾಗ ಆತನಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಪೊಲೀಸರು ಆತಂಕಗೊಂಡಿದ್ದಾರೆ.
ಪಾದರಾಯಪುರದ ಆರೋಪಿ ಪಟ್ಟಣದಲ್ಲಿ ಕಬ್ಬಿಣ ಕಳ್ಳತನ ಮಾಡಲೆಂದು ಬಂದಿದ್ದ. ಆತನನ್ನು ಜನರು ಹಿಡಿದು ಪೊಲೀಸರಿಗೆ ಒಪ್ಪಿದ್ದರು. ಈ ವೇಳೆ ಆರೋಪಿಗೆ ಕೊರೊನಾ ಪರೀಕ್ಷೆ ನಡೆಸಿದಾಗ ಸೋಂಕು ದೃಢಪಟ್ಟಿತ್ತು. ಆರೋಪಿಯನ್ನು ಆಸ್ಪತ್ರೆಗೆ ದಾಖಲಿಸಿಲಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯ ಅಧಿಕಾರಿಗಳಿಗೆ ಕ್ವಾರಂಟೈನ್ಗೆ ಸೂಚಿಸಲಾಗಿದ್ದು, ಠಾಣೆ ಸುತ್ತ ಸ್ಯಾನಿಟೈಸರ್ ಸಿಂಪಡಣೆ ಮಾಡಲಾಗಿದೆ.