ಬೆಂಗಳೂರು: ಕರ್ನಾಟಕದಲ್ಲಿ ಅವಧಿಗೂ ಮೊದಲೇ ಬೇಸಿಗೆ ಬರುತ್ತಿದ್ದು, ತಾಪಮಾನ ಏರಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮಾರ್ಚ್ 1 ರ ಬದಲಿಗೆ ಫೆಬ್ರವರಿ 24 ರಿಂದಲೇ ಬೇಸಿಗೆ ಆರಂಭವಾಗಲಿದ್ದು, ತಾಪಮಾನ ದಿಢೀರ್ ಹೆಚ್ಚಾಗಲಿದೆ. ಇದು ಶುಷ್ಕ ಹವಾಮಾನದ ಮುನ್ಸೂಚನೆ. ಉತ್ತರ ಮತ್ತು ವಾಯುವ್ಯ ಮಾರುತಗಳು ಬೆಚ್ಚಗಿರುವುದು ಇದಕ್ಕೆ ಕಾರಣ ಎಂದು ತಿಳಿಸಿದೆ.
ಐಎಂಡಿಯ ಬೆಂಗಳೂರು ಕೇಂದ್ರದ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿ, ಕರ್ನಾಟಕದ ಕೆಲವು ಭಾಗಗಳಲ್ಲಿ ಈಗಾಗಲೇ ಸಾಮಾನ್ಯ ಗರಿಷ್ಠ ತಾಪಮಾನ ದಾಖಲಾಗುತ್ತಿದೆ. ಬೆಂಗಳೂರಿನಲ್ಲಿ ತಾಪಮಾನ ಸುಮಾರು 31 ರಿಂದ 32 ಡಿಗ್ರಿ ಸೆಲ್ಸಿಯಸ್‌ನಲ್ಲಿದ್ದರೂ, ಸಾಪೇಕ್ಷ ಆರ್ದ್ರತೆಯ ಮಟ್ಟ ಸುಮಾರು 20 ರಿಂದ 35 ಪ್ರತಿಶತದಷ್ಟಿದ್ದು ನಾಗರಿಕರು ಸೆಖೆ ಅನುಭವಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.