ಕರ್ನಾಟಕ

karnataka

ETV Bharat / state

ರಾಜ್ಯ ಸಚಿವ ಸಂಪುಟ ರಚನೆ ಕಸರತ್ತು ಆರಂಭ; ಸಿಎಂ ಡಿಸಿಎಂ ಸೇರಿ 30 ಮಂದಿಗೆ ಸ್ಥಾನ ಸಾಧ್ಯತೆ

ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್​ ಪ್ರಮಾಣವಚನ ಸ್ವೀಕರಿಸಿದ ನಂತರ ಎರಡು ದಿನಗಳಲ್ಲಿ ಸಚಿವ ಸಂಪುಟ ರಚನೆಯಾಗಲಿದೆ ಎನ್ನಲಾಗುತ್ತದೆ.

ಸಚಿವ ಸಂಪುಟ ರಚನೆ ಕಸರತ್ತು ಆರಂಭ
ಸಚಿವ ಸಂಪುಟ ರಚನೆ ಕಸರತ್ತು ಆರಂಭ

By

Published : May 18, 2023, 10:57 AM IST

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಆಯ್ಕೆ ಅಂತಿಮವಾಗಿದ್ದು ಇದೀಗ ಸಂಪುಟ ರಚನೆ ಕಸರತ್ತು ಆರಂಭವಾಗಿದೆ. ಸಿದ್ದರಾಮಯ್ಯ ಬಣದಿಂದ 3 ಡಿಸಿಎಂ ಹುದ್ದೆ ಸೃಷ್ಟಿಸುವ ಒತ್ತಡ ಕೇಳಿ ಬಂದಿತ್ತು. ಆದರೆ ಡಿಕೆ ಶಿವಕುಮಾರ್ ಇದನ್ನ ಒಪ್ಪದ ಹಿನ್ನೆಲೆ ಅವರನ್ನು ಹೊರತುಪಡಿಸಿ ಬೇರೆ ಯಾರು ಡಿಸಿಎಂ ಇರುವುದಿಲ್ಲ ಎಂಬ ಮಾಹಿತಿ ಇದೆ. ಮೊದಲು ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಸಿಎಂ ಹಾಗೂ ಡಿಸಿಎಂಗಳಾಗಿ ಪ್ರಮಾಣವಚನ ಸ್ವೀಕರಿಸಲಿದ್ದು ಒಂದೆರಡು ದಿನಗಳ ಬಳಿಕ ಸಚಿವರ ಆಯ್ಕೆ ಆಗಲಿದೆ ಎಂಬ ಮಾಹಿತಿಯು ಇದೆ.

25 ರಿಂದ 30 ಸಚಿವರಿಗೆ ಅವಕಾಶ 4 ರಿಂದ 5 ಸ್ಥಾನ ಖಾಲಿ ಬಿಟ್ಟುಕೊಳ್ಳಲು ನಿರ್ಧಾರ ಮಾಡಲಾಗಿದೆ. ಹೈಕಮಾಂಡ್ ನಿಂದ ತಮ್ಮದೇ ಆದ ಸೂತ್ರದಲ್ಲಿ ಸಂಪುಟ ಸಿದ್ದವಾಗಿದೆ. ಪ್ರಾದೇಶಿಕ ಸಾಮಾಜಿಕ ನ್ಯಾಯಕ್ಕೆ ಒತ್ತುಕೊಟ್ಟು ಶನಿವಾರ ಬೆಳಗ್ಗೆ 12:30 ಕ್ಕೆ ಪದಗ್ರಹಣ ಸಿಎಂ ಆಗಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಆಗಿ ಡಿಕೆಶಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

ಸಂಭಾವ್ಯ ಸಚಿವರ ವಿವರ:ಸಂಭಾವ್ಯ ಸಚಿವರು ಶರಣಪ್ರಕಾಶ್ ಪಾಟೀಲ್, ಅಜಯ್ ಸಿಂಗ್, ಬಿಕೆ ಹರಿಪ್ರಸಾದ್, ಕೆಜೆ ಜಾರ್ಜ್, ಈಶ್ವರ್ ಖಂಡ್ರೆ, ಎಂಬಿ ಪಾಟೀಲ್, ಆರ್ ವಿ ದೇಶಪಾಂಡೆ, ಯುಟಿ ಖಾದರ್, ರಾಮಲಿಂಗ ರೆಡ್ಡಿ, ಕೃಷ್ಣ ಬೈರೇಗೌಡ, ಜಮೀರ್ ಅಹ್ಮದ್, ಡಾ. ಜಿ ಪರಮೇಶ್ವರ್, ಕೆಎಚ್ ಮುನಿಯಪ್ಪ ಮತ್ತಿತರರು ಅವಕಾಶ ಪಡೆಯಲಿದ್ದಾರೆ.

ಇವರಲ್ಲದೇ ದಿನೇಶ್ ಗುಂಡೂರಾವ್, ಎಂ. ಕೃಷ್ಣಪ್ಪ, ಎಂ ಬಿ ಪಾಟೀಲ್, ಲಕ್ಷ್ಮಣ್ ಸವದಿ ಸತೀಶ್ ಜಾರಕಿಹೊಳಿ, ಆರ್ ಬಿ ತಿಮ್ಮಾಪುರ್, ಪ್ರಿಯಾಂಕ ಖರ್ಗೆ, ಎಚ್ ಕೆ ಪಾಟೀಲ್, ಆರ್ ವಿ ದೇಶಪಾಂಡೆ, ಎಸ್ ಎಸ್ ಮಲ್ಲಿಕಾರ್ಜುನ್ ಮಧು ಬಂಗಾರಪ್ಪ, ರುದ್ರಪ್ಪ ಲಮಾಣಿ, ನಾಗೇಂದ್ರ, ಚೆಲುವರಾಯಸ್ವಾಮಿ, ಎಚ್ ಸಿ ಮಹದೇವಪ್ಪ, ಪುಟ್ಟರಂಗಶೆಟ್ಟಿ ಹೆಸರು ಸಚಿವರಾಗುವರ ಪಟ್ಟಿಯಲ್ಲಿ ಮುಂಚೂಣಿಯಲ್ಲಿ ಕೇಳಿ ಬರುತ್ತಿದೆ.

ಚುನಾವಣೆ ಫಲಿತಾಂಶ ಪ್ರಕಟವಾಗಿ ಐದು ದಿನಗಳೇ ಕಳೆದಿದ್ದು, ಶನಿವಾರ ಸಂಪುಟ ರಚನೆ ಆಗಲಿದೆ ಎಂಬ ಮಾತು ಕೇಳಿ ಬರುತ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್​ಗೆ ಜನ ಪೂರ್ಣ ಬಹುಮತ ನೀಡಿ ಅಧಿಕಾರಕ್ಕೆ ತಂದಿದ್ದಾರೆ. ಆದರೆ ಸಿಎಂ ಸ್ಥಾನಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತೀವ್ರ ಪೈಪೋಟಿ ನಡೆಸಿದ ಹಿನ್ನೆಲೆ ಸರ್ಕಾರ ರಚನೆ ವಿಳಂಬವಾಗುತ್ತಿತ್ತು. ಇದೀಗ ತಲಾ ಎರಡುವರೆ ವರ್ಷಗಳ ಅಧಿಕಾರ ಹಂಚಿಕೆ ಸೂತ್ರಕ್ಕೆ ಇಬ್ಬರು ನಾಯಕರು ಒಪ್ಪಿಕೊಂಡಿದ್ದು ಮೊದಲ ಅವಧಿಗೆ ಸಿದ್ದರಾಮಯ್ಯ ಹಾಗೂ ಎರಡನೇ ಅವಧಿಗೆ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಲಿದ್ದಾರೆ.

ಅಲ್ಲದೆ ಮುಂದಿನ ಚುನಾವಣೆ ಶಿವಕುಮಾರ್ ನೇತೃತ್ವದಲ್ಲಿ ನಡೆಯಲಿದೆ. ಸಿದ್ದರಾಮಯ್ಯ ಸಿಎಂ ಆಗಿರುವ ವೇಳೆ ಡಿಕೆ ಶಿವಕುಮಾರ್ ಏಕೈಕ ಡಿಸಿಎಂ ಆಗಿ ಕಾರ್ಯನಿರ್ವಹಿಸುವ ಜೊತೆಗೆ ಒಂದರಿಂದ ಎರಡು ಪ್ರಮುಖ ಖಾತೆಗಳು ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ಹೊಂದಿರಲಿದ್ದಾರೆ ಎಂಬ ಮಾಹಿತಿ ಇದೆ. ರಾಜ್ಯದಲ್ಲಿ ಸರ್ಕಾರ ರಚನೆ ಕಸರತ್ತು ಕೊನೆಗೂ ದಿಲ್ಲಿಯಲ್ಲಿ ಬಗೆಹರಿದಿದ್ದು ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬರುವ ಕ್ಷಣಗಣನೆ ಆರಂಭವಾಗಿದೆ.

ಇದನ್ನೂ ಓದಿ:ಸಿದ್ದರಾಮಯ್ಯಗೆ ಸಿಎಂ ಪಟ್ಟ, ಡಿಸಿಎಂ ಆಗಿ ಡಿ.ಕೆ.ಶಿವಕುಮಾರ್; 20ಕ್ಕೆ ಪ್ರಮಾಣ ವಚನ

ABOUT THE AUTHOR

...view details