ಬೆಂಗಳೂರು: ರಾಜ್ಯದಲ್ಲಿ ತಲೆದೋರಿರುವ ನೆರೆ ಹಾವಳಿಯಿಂದ 2019-20ನೇ ಸಾಲಿನ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ನಿಗದಿಗೊಳಿಸಿದ್ದ ಕಾಲಮಿತಿಯನ್ನು ಆಗಸ್ಟ್ 18ರವರೆಗೆ ಕಾಲಾವಕಾಶ ನೀಡಿ ಸಾರ್ವಜನಿಕ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.
'ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ'ಗೆ ಅರ್ಜಿ ಸಲ್ಲಿಸಲು ಕಾಲಾವಕಾಶ - ಶಿಕ್ಷಣಾಧಿಕಾರಿ
ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಮತ್ತೆ ಆಗಸ್ಟ್ 18ರವರೆಗೆ ಕಾಲಾವಕಾಶ ಕೊಟ್ಟು ಸಾರ್ವಜನಿಕ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.
ನೆರೆ ಪ್ರವಾಹದಿಂದ ಶಿಕ್ಷಕರು ಅರ್ಜಿ ಸಲ್ಲಿಸಲು ತೊಂದರೆ ಉಂಟಾಗಿರುವುದನ್ನು ಮನಗಂಡು, ಮತ್ತಷ್ಟು ಕಾಲಾವಕಾಶ ನೀಡಲಾಗಿದೆ. ಆನ್ ಲೈನ್ ಜೊತೆಗೆ ಭೌತಿಕವಾಗಿ ಅರ್ಜಿ ಸಲ್ಲಿಸಲು ಮತ್ತು ತಾಲ್ಲೂಕು ಹಾಗೂ ಜಿಲ್ಲಾ ಆಯ್ಕೆ ಸಮಿತಿಗೆ ಆಯ್ಕೆ ಪ್ರಕ್ರಿಯೆ ನಿಗದಿಗೊಳಿಸಲಾಗಿದ್ದ ಕಾಲಮಿತಿಯನ್ನು ಪುನರ್ ನಿಗದಿಗೊಳಿಸಲಾಗಿದೆ.
ಅರ್ಜಿ ಸಲ್ಲಿಸಲು ಆಗಸ್ಟ್ 18ರವರೆಗೆ ವಿಸ್ತರಿಸಲಾಗಿದೆ. ತಾಲ್ಲೂಕು ಮಟ್ಟದ ಆಯ್ಕೆ ಸಮಿತಿಗಳಿಗೆ ಪ್ರಕ್ರಿಯೆಗಾಗಿ, ಆಗಸ್ಟ್ 19 ರಿಂದ 22 ರವರೆಗೆ ಮತ್ತು ಜಿಲ್ಲಾ ಮಟ್ಟದ ಆಯ್ಕೆ ಸಮಿತಿಗಳಿಗೆ ಆಗಸ್ಟ್ 23 ರಿಂದ 26 ಹಾಗೂ ಜಿಲ್ಲಾ ಮಟ್ಟದ ಆಯ್ಕೆ ಸಮಿತಿಗಳು ಅನುಮೋದಿತ ಪ್ರಸ್ತಾವನೆಗಳನ್ನು ಆಯುಕ್ತರ ಕಚೇರಿಗೆ ಸಲ್ಲಿಸಲು ಆಗಸ್ಟ್ 27 ರವರಗೆ ಅವಧಿ ನಿಗಧಿಪಡಿಸಲಾಗಿದೆ. ಇನ್ನು ಈ ಮಾಹಿತಿಯನ್ನು ಶಿಕ್ಷಣಾಧಿಕಾರಿಗಳು ಕಚೇರಿಯ ಸೂಚನಾ ಫಲಕದಲ್ಲಿ ಹಾಕಿ ಶಿಕ್ಷಕರ ಗಮನಕ್ಕೆ ತರುವಂತೆ ತಿಳಿಸಲಾಗಿದೆ.