ನವದೆಹಲಿ/ ಬೆಂಗಳೂರು: ಸ್ಯಾಂಡಲ್ವುಡ್ಗೆ ಡ್ರಗ್ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ ದ್ವಿವೇದಿ ಜಾಮೀನು ಕೋರಿ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಯಾವುದೇ ವಾದ, ಪ್ರತಿವಾದ ಆಲಿಸದ ನ್ಯಾಯಾಲಯ ವಿಚಾರಣೆಯನ್ನು ಮುಂದೂಡಿ ಆದೇಶ ಹೊರಡಿಸಿದೆ.
ಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣ.. ರಾಗಿಣಿ ಜಾಮೀನು ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂ - Postponement of actress Ragini's bail application in supreme
ನಟಿ ರಾಗಿಣಿ ದ್ವಿವೇದಿ ಜಾಮೀನು ಕೋರಿ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಯಾವುದೇ ವಾದ, ಪ್ರತಿವಾದ ಆಲಿಸದ ನ್ಯಾಯಾಲಯ ವಿಚಾರಣೆಯನ್ನು ಮುಂದೂಡಿ ಆದೇಶ ಹೊರಡಿಸಿದೆ.
ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ್ದನ್ನು ಪ್ರಶ್ನಿಸಿ ನಟಿ ರಾಗಿಣಿ ಪರವಾಗಿ ವಕೀಲರಾದ ಶಾಹಿಲ್ ಭಾಲೈಕ್, ಸುಪ್ರಿಂಕೋರ್ಟ್ಗೆ ಅರ್ಜಿ ಸಲ್ಲಿಕೆ ಮಾಡಿದ್ದರು. ಡಿಸೆಂಬರ್ 26 ರಂದು ಅಧಿಕೃತವಾಗಿ ಸ್ಕ್ರೂಟನಿ ಆಗಿದ್ದ ಜಾಮೀನು ಅರ್ಜಿ, ಮೊದಲು ಜನವರಿ 4ಕ್ಕೆ ಲಿಸ್ಟ್ ಆಗಿತ್ತು. ಇತ್ತ ಜಾಮೀನು ನೀಡದಂತೆ ಸಿಸಿಬಿ ಅರ್ಜಿ ಸಲ್ಲಿಸಿ ಮನವಿ ಮಾಡಿತ್ತು.
CCB ಪರ ಸುಪ್ರಿಂಕೋರ್ಟ್ ವಕೀಲ ತುಷಾರ್ ಮೆಹ್ತಾ ವಾದ ಮಂಡಿಸಿದ್ದು, ಹೈಕೋರ್ಟ್ನಲ್ಲಿ ಉಲ್ಲೇಖಿಸಿದ್ದ ಅಂಶಗಳನ್ನೇ ಪುನಃ ಪ್ರಸ್ತಾಪಿಸಿ ಅರ್ಜಿ ಸಲ್ಲಿಕೆ ಮಾಡಿದ್ದರು. ಡ್ರಗ್ಸ್ ಸೇವನೆ ಅಷ್ಟೇ ಅಲ್ಲದೇ ಮಾರಾಟ ಮಾಡುತ್ತಿದ್ದ ಬಗ್ಗೆ ಹೇಳಲಾಗಿದೆ. ಆ ಕಾರಣಕ್ಕೆ ಇವರ ವಿರುದ್ಧ ಎನ್ಡಿಪಿಎಸ್ ಆಕ್ಟ್ 27ಎ ಅಡಿ ಪ್ರಕರಣ ದಾಖಲಾಗಿದ್ದು, ಆರೋಪಿಗೆ ಯಾವುದೇ ಕಾರಣಕ್ಕೂ ಜಾಮೀನು ನೀಡಬಾರದು ಎಂದು ಸರ್ಕಾರಿ ವಕೀಲರು ವಾದ ಮಾಡಿದ್ದರು.