ಬೆಂಗಳೂರು:ಜೂನ್ ತಿಂಗಳಿನಲ್ಲಿ ನಡೆಯಬೇಕಿದ್ದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆಯನ್ನು ಮುಂದೂಡುವಂತೆ ಸರ್ಕಾರ ಆದೇಶಿಸಿದೆ ಎಂದು ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಗುಬ್ಬಿ ಜೈರಾಜ್ ತಿಳಿಸಿದ್ದಾರೆ.
ಇನ್ನು ಈ ಚುನಾವಣೆ ನಡೆಯುವವರೆಗೂ ಅಧ್ಯಕ್ಷರಾಗಿ ಗುಬ್ಬಿ ಜೈರಾಜ್ ಅವರಿಗೆ ಮುಂದುವರೆಯುವಂತೆ ಮುಖ್ಯಮಂತ್ರಿಗಳು ಸೂಚನೆ ನೀಡಿದ್ದು, ಮೇ ತಿಂಗಳಿನಲ್ಲಿ ನಡೆಯಬೇಕಿದ್ದ ವಾಣಿಜ್ಯ ಮಂಡಳಿಯ 75 ನೇ ವರ್ಷದ ಅದ್ದೂರಿ ಕಾರ್ಯಕ್ರವನ್ನು ಸಹ ಸದ್ಯದ ಪರಿಸ್ಥಿತಿಯಲ್ಲಿ ಮುಂದೂಡಲಾಗಿದೆ ಎಂದು ಈಟಿವಿ ಭಾರತ್ಗೆ ಗುಬ್ಬಿ ಜೈರಾಜ್ ತಿಳಿಸಿದ್ದಾರೆ.
ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಗುಬ್ಬಿ ಜೈರಾಜ್ ಕೊರೊನ ಪರಿಸ್ಥಿತಿ ನಿಯಂತ್ರಣಕ್ಕೆ ಬಂದ ನಂತರ ವಾಣಿಜ್ಯ ಮಂಡಳಿಯ 75 ನೇ ವರ್ಷದ ಕಾರ್ಯಕ್ರಮ ಮಾಡುತ್ತೇವೆ. ಒಂದು ವೇಳೆ ಸದ್ಯಕ್ಕೆ ಪರಿಸ್ಥಿತಿ ನಿಯಂತ್ರಣಕ್ಕೆ ಬಾರದಿದ್ದರೆ, ಮುಂದಿನ ಚುನಾವಣೆಯಲ್ಲಿ ಆಯ್ಕೆಯಾದವರು ಕಾರ್ಯಕ್ರಮ ಮಾಡಲಿದ್ದಾರೆ. ಕಾರ್ಯಕ್ರಮವನ್ನು ಯಾವುದೇ ಕಾರಣಕ್ಕೂ ಕ್ಯಾನ್ಸಲ್ ಮಾಡುವುದಿಲ್ಲ ಎಂದು ಗುಬ್ಬಿ ಜೈರಾಜ್ ಹೇಳಿದರು.
ಇನ್ನು ಮೇ ಅಂತ್ಯಕ್ಕೆ ಜೈರಾಜ್ ಅವರ ಅಧಿಕಾರಾವಧಿ ಮುಗಿಯಲಿದ್ದು, ಜೂನ್ ಮೊದಲ ವಾರದಲ್ಲಿ ವಾಣಿಜ್ಯ ಮಂಡಳಿ ಚುನಾವಣೆ ನಡೆಯಬೇಕಿತ್ತು. ಆದರೆ, ಕೊರೊನಾ ಇರುವ ಕಾರಣ ಸರ್ಕಾರ ಚುನಾವಣೆಯನ್ನು ಮುಂದೂಡಿದ್ದು, ಚುನಾವಣೆ ನಡೆಸುವಂತೆ ಸರ್ಕಾರ ಅದೇಶಿಸುವವರೆಗೂ ಜೈರಾಜ್ ಅಧ್ಯಕ್ಷರಾಗಿ ಮುಂದುವರೆಯಲಿದ್ದಾರೆ.