ಬೆಂಗಳೂರು :ಪ್ರತಿ 3ನೇ ಶನಿವಾರ ವಿದ್ಯುತ್ ಅದಾಲತ್ ನಡೆಬೇಕೆಂದು ಇಂಧನ ಸಚಿವ ಸುನಿಲ್‌ಕುಮಾರ್ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಈ ಕುರಿತು ಆದೇಶ ಹೊರಬಿದ್ದಿದೆ. ಪ್ರತಿ ತಿಂಗಳ 3ನೇ ಶನಿವಾರ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಸೇರಿದಂತೆ ಎಲ್ಲ ಅಧಿಕಾರಿಗಳು ತಾಲೂಕಿನ ಕೊನೆ ಹಳ್ಳಿವರೆಗೆ ಭೇಟಿ ನೀಡಬೇಕು. ವಿದ್ಯುತ್ ಅದಾಲತ್ ಮಾಡಿ ಸಮಸ್ಯೆಗಳಿಗೆ ಪರಿಹಾರ ನೀಡಬೇಕು ಎಂದು ಅಧಿಕಾರಿಗಳಿಗೆ ಹೇಳಿದ್ದಾರೆ.
ಗ್ರಾಮೀಣ ಪ್ರದೇಶಗಳಲ್ಲಿನ ವಿದ್ಯುತ್ ಸಮಸ್ಯೆಗಳ ಬಗ್ಗೆ ಅರಿತು, ತಕ್ಷಣ ಪರಿಹಾರ ನೀಡಲು ಆಂದೋಲನ ರೀತಿಯ ಕಾರ್ಯಕ್ರಮ ರೂಪಿಸಬೇಕು. ಪ್ರತಿ ತಿಂಗಳ 3ನೇ ಶನಿವಾರ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಸೇರಿದಂತೆ ಎಲ್ಲ ಅಧಿಕಾರಿಗಳು ತಾಲೂಕಿನ ಕೊನೇ ಹಳ್ಳಿವರೆಗೆ ಭೇಟಿ ನೀಡಬೇಕು. ವಿದ್ಯುತ್ ಅದಾಲತ್ ಮಾಡಿ ಸಮಸ್ಯೆಗಳಿಗೆ ಪರಿಹಾರ ನೀಡಬೇಕು ಎಂದು ಅಧಿಕಾರಿಗಳಿಗೆ ಆದೇಶಿಸಿದ್ದಾರೆ.
ಎಲ್ಲ ಹಳ್ಳಿಗಳಿಗೆ ಭೇಟಿ : ಕಾರ್ಯಕ್ರಮದಲ್ಲಿ ವ್ಯವಸ್ಥಾಪಕ ನಿರ್ದೇಶಕರಮಟ್ಟದ ಅಧಿಕಾರಿಗಳಿಂದ ಸಹಾಯಕ ಕಾರ್ಯಪಾಲಕ ಇಂಜಿನಿಯರ್‌ವರೆಗಿನ ಅಧಿಕಾರಿಗಳು ತಾಲೂಕಿನ ಕೊನೇ ಹಳ್ಳಿವರೆಗೆ ಹೋಗಿ, ಸಮಸ್ಯೆ ಆಲಿಸಿ, ಪರಿಹಾರ ನೀಡಬೇಕು. ಎಲ್ಲರೂ ಒಂದೇ ಹಳ್ಳಿಗೆ ಭೇಟಿ ನೀಡದೆ, ಬೇರೆ ಹಳ್ಳಿಗಳಿಗೆ ಭೇಟಿ ನೀಡುವಂತೆ ಸಚಿವ ಸುನಿಲ್ ಕುಮಾರ್ ತಿಳಿಸಿದ್ದಾರೆ.