ಬೆಂಗಳೂರು:ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ತಿದ್ದುಪಡಿ ವಿಧೇಯಕ ಮಂಡಿಸುತ್ತಿದ್ದಂತೆ ಪಶುಸಂಗೋಪನಾ ಸಚಿವ ಪ್ರಭು ಚೌವ್ಹಾಣ್ ಗೋವುಗಳಿಗೆ ಪೂಜೆ ನೆರವೇರಿಸಿದ್ದಾರೆ.
ಗೋ ಹತ್ಯೆ ನಿಷೇಧ ವಿಧೇಯಕ ಮಂಡಿಸಿ ಗೋ ಪೂಜೆ ನೆರವೇರಿಸಿದ ಸಚಿವ ಪ್ರಭು ಚೌವ್ಹಾಣ್! - ಗೋ ಪೂಜೆ ನೆರವೇರಿಸಿದ ಪ್ರಭು ಚಹ್ವಾಣ್
ಗೋ ಹತ್ಯೆ ನಿಷೇಧ ವಿಧೇಯಕವನ್ನು ಸದನದಲ್ಲಿ ಮಂಡಿಸಿದ ನಂತರ ವಿಧಾನಸೌಧದ ಮುಂಭಾಗದಲ್ಲಿ ಗೋವುಗಳಿಗೆ ಪೂಜೆ ಸಲ್ಲಿಕೆ ಮಾಡಲಾಯಿತು.
ಗೋ ಹತ್ಯೆ ನಿಷೇಧ ತಿದ್ದುಪಡಿ ವಿಧೇಯಕವನ್ನು ಸದನದಲ್ಲಿ ಮಂಡಿಸಿದ ನಂತರ ವಿಧಾನಸೌಧದ ಮುಂಭಾಗದಲ್ಲಿ ಗೋವುಗಳಿಗೆ ಪೂಜೆ ಸಲ್ಲಿಕೆ ಮಾಡಲಾಯಿತು. ವಿಧೇಯಕ ಮಂಡಿಸಲು ನಿರ್ಧರಿಸಿದ್ದ ಹಿನ್ನೆಲೆ ಬಿಜೆಪಿ ಕಾರ್ಯಕರ್ತರು ಬಿಬಿಎಂಪಿ ವಾಹನದಲ್ಲಿ ಗೋವುಗಳನ್ನು ವಿಧಾನಸೌಧಕ್ಕೆ ತಂದಿದ್ದು, ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್ ಪೂಜೆ ಸಲ್ಲಿಸಿದರು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ, ಶಾಸಕಿ ರೂಪಾಲಿ ನಾಯ್ಕ್ ಸಚಿವರಿಗೆ ಸಾಥ್ ನೀಡಿದರು. ಗೋವುಗಳಿಗೆ ಪೂಜೆ ಸಲ್ಲಿಸಿ, ಗೋ ಹತ್ಯೆ ನಿಷೇಧ ಕಾಯ್ದೆ ಜಾರಿ ಮಾಡುವುದಾಗಿ ಕೊಟ್ಟಿದ್ದ ಮಾತನ್ನು ಬಿಜೆಪಿ ಉಳಿಸಿಕೊಂಡಿದೆ ಎಂದು ಸಚಿವ ಪ್ರಭು ಚೌವ್ಹಾಣ್ ಹೇಳಿದರು.