ಕರ್ನಾಟಕ

karnataka

ETV Bharat / state

ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸುವವರೆಗೂ ಅಸಿಂಧು ಆದೇಶಕ್ಕೆ ತಡೆ ಕೋರಿ ಹೈಕೋರ್ಟ್‌ಗೆ ಪ್ರಜ್ವಲ್ ರೇವಣ್ಣ ಮನವಿ - seeking a stay on disqualification order

Prajwal Revanna appeal to High Court: ಲೋಕಸಭಾ ಸದಸ್ಯ ಸ್ಥಾನದಿಂದ ಅಸಿಂಧು ಆದೇಶಕ್ಕೆ ತಡೆ ನೀಡುವಂತೆ ಕೋರಿ ಪ್ರಜ್ವಲ್ ರೇವಣ್ಣ ಹೈಕೋರ್ಟ್‌ಗೆ ಮಧ್ಯಂತರ ಅರ್ಜಿ ಸಲ್ಲಿಸಿದ್ದಾರೆ.

prajwal-revanna-appeals-to-high-court-seeking-a-stay-on-disqualification-order
ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸುವವರೆಗೂ ಅಸಿಂಧು ಆದೇಶಕ್ಕೆ ತಡೆ ಕೋರಿ ಹೈಕೋರ್ಟ್‌ಗೆ ಪ್ರಜ್ವಲ್ ರೇವಣ್ಣ ಮನವಿ

By ETV Bharat Karnataka Team

Published : Sep 4, 2023, 4:57 PM IST

Updated : Sep 4, 2023, 7:45 PM IST

ಬೆಂಗಳೂರು : ಹಾಸನ ಲೋಕಸಭಾ ಕ್ಷೇತ್ರದ ಸಂಸದ ಸ್ಥಾನದಿಂದ ಅಸಿಂಧುಗೊಳಿಸಿರುವ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಕೆ ಮಾಡಬೇಕಾಗಿದ್ದು, ಅಲ್ಲಿಯವರೆಗೆ ಅಸಿಂಧು ಆದೇಶಕ್ಕೆ ತಡೆ ನೀಡಬೇಕು ಎಂದು ಕೋರಿ ಪ್ರಜ್ವಲ್ ರೇವಣ್ಣ ಹೈಕೋರ್ಟ್‌ಗೆ ಮಧ್ಯಂತರ ಅರ್ಜಿ ಸಲ್ಲಿಕೆ ಮಾಡಿದ್ದಾರೆ.

ಹೈಕೋರ್ಟ್ ಆದೇಶಕ್ಕೆ ತಡೆ ನೀಡಬೇಕು ಎಂದು ಕೋರಿರುವ ಪ್ರಜ್ವಲ್ ರೇವಣ್ಣ ಅರ್ಜಿ ಇನ್ನಷ್ಟೇ ವಿಚಾರಣೆಗೆ ಬರಲಿದೆ. ಹಾಸನ ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿ ಆಯ್ಕೆಯಾಗಿದ್ದ ಪ್ರಜ್ವಲ್ ರೇವಣ್ಣ ಚುನಾವಣಾ ಆಯೋಗಕ್ಕೆ ಸುಳ್ಳು ಮಾಹಿತಿ ನೀಡಿದ್ದಾರೆ ಎಂದು ಆರೋಪಿಸಿ ಪರಾಜಿತ ಅಭ್ಯರ್ಥಿ ಎ. ಮಂಜು ಮತ್ತು ವಕೀಲ ದೇವರಾಜೇಗೌಡ ಎಂಬುವರು ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ ನಟರಾಜನ್ ಅವರ ನೇತೃತ್ವದ ಪೀಠ, ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿ ಆದೇಶಿಸಿತ್ತು.

ಪ್ರಕರಣದ ಹಿನ್ನೆಲೆ:ಕಳೆದ ಲೋಕಸಭೆ ಚುನಾವಣೆ ವೇಳೆ ಪ್ರಜ್ವಲ್ ರೇವಣ್ಣ ಅವರು ನಾಮಪತ್ರ ಸಲ್ಲಿಸುವಾಗ ಪೂರ್ಣ ಪ್ರಮಾಣದಲ್ಲಿ ಆಸ್ತಿ ವಿವರ ಘೋಷಿಸಿಲ್ಲ ಎಂದು ಅರ್ಜಿದಾರರಾದ ಬಿಜೆಪಿಯ ಪರಾಜಿತ ಅಭ್ಯರ್ಥಿ ಎ. ಮಂಜು ದೂರಿದ್ದರು. ಆದರೆ, ಮಂಜು ಅರ್ಜಿ ದೋಷಪೂರಿತವಾಗಿದೆ ಎಂದು ಜನವರಿ 17ರಂದು ರಾಜ್ಯ ಹೈಕೋರ್ಟ್ ಅವರ ಅರ್ಜಿಯನ್ನು ವಜಾಗೊಳಿಸಿತ್ತು. ಅದರಲ್ಲಿನ ಲೋಪಗಳನ್ನು ಸರಿಪಡಿಸಲು ಕಾಲಾವಕಾಶ ನೀಡಿದ ನಂತರವೂ ಕಾಲಮಿತಿಯಲ್ಲಿ ಅವುಗಳನ್ನು ಸರಿಪಡಿಸಿಲ್ಲ ಎಂದು ಕೋರ್ಟ್​ ಹೇಳಿತ್ತು.

ಬಳಿಕ ಹೈಕೋರ್ಟ್ ಆದೇಶ ಪ್ರಶ್ನಿಸಿ ದೇವರಾಜೇಗೌಡ ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು. ಈ ಹಿನ್ನೆಲೆಯಲ್ಲಿ ಅರ್ಜಿ ವಿಚಾರಣೆ ನಡೆಸುವಂತೆ ಹೈಕೋರ್ಟ್​​ಗೆ ಸುಪ್ರೀಂಕೋರ್ಟ್ ಸೂಚಿಸಿತ್ತು. ಪ್ರಜ್ವಲ್ ರೇವಣ್ಣ ಅಕ್ರಮ ಆಸ್ತಿ ಗಳಿಸಿದ್ದು, ಈ ಬಗ್ಗೆ ವಿಚಾರಣೆ ನಡೆಸದೇ ತಾಂತ್ರಿಕ ಕಾರಣ ನೀಡಿ ಹೈಕೋರ್ಟ್ ಅರ್ಜಿ ವಜಾ ಮಾಡಿದೆ. ಆದ ಕಾರಣ ಸುಪ್ರೀಂಕೋರ್ಟ್ ವಿಚಾರಣೆ ನಡೆಸಬೇಕು ಎಂದು ದೇವರಾಜೇಗೌಡ ಮನವಿ ಮಾಡಿದ್ದರು. ಪ್ರಜ್ವಲ್ ಅವರು 15ನೇ ವಯಸ್ಸಿಗೆ 23 ಕೋಟಿ ರೂ. ಆಸ್ತಿ ಮಾಡಿದ್ದಾರೆ. ಆದರೆ, ಆದಾಯ ತೆರಿಗೆ ಇಲಾಖೆಗೆ ಸಲ್ಲಿಸಿದ ಮಾಹಿತಿಯಲ್ಲಿ ಈ ಬಗ್ಗೆ ತಿಳಿಸಿಲ್ಲ. ಅಲ್ಲದೆ, ಚುನಾವಣಾ ಆಯೋಗಕ್ಕೂ ಆಸ್ತಿಯ ಬಗ್ಗೆ ಸುಳ್ಳು ಮಾಹಿತಿ ನೀಡಿದ್ದಾರೆ. ಬೇನಾಮಿ ಆಸ್ತಿ ಮತ್ತು ಗೋಮಾಳ ಕಬಳಿಕೆ ಮಾಡಿದ್ದಾರೆ. ಈ ಬಗ್ಗೆ ಆದಾಯ ತೆರಿಗೆ ಇಲಾಖೆಯಿಂದ ತನಿಖೆ ನಡೆಯಬೇಕು ಎಂದು ದೇವರಾಜೇಗೌಡ ಕೋರಿದ್ದರು.

ಇದನ್ನೂ ಓದಿ:ಸಂಸದ ಸ್ಥಾನದಿಂದ ಪ್ರಜ್ವಲ್​ ರೇವಣ್ಣ ಅನರ್ಹ: ಹೈಕೋರ್ಟ್​​ ಆದೇಶ

Last Updated : Sep 4, 2023, 7:45 PM IST

ABOUT THE AUTHOR

...view details