ಬೆಂಗಳೂರು: ಮನೆಕೆಲಸದಲ್ಲಿ ತೊಡಗಿಸಿಕೊಂಡಿರುವ ಮಹಿಳೆಯರಿಗಾಗಿ ಪ್ರತ್ಯೇಕ ಕಲ್ಯಾಣ ಮಂಡಳಿ ಸ್ಥಾಪಿಸುವ ಹಾಗೂ ಲೈಂಗಿಕ ಕಾರ್ಯಕರ್ತೆಯರಿಗೆ ಪುನರ್ ವಸತಿ ಕಲ್ಪಿಸುವಂತೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮೀಳಾ ನಾಯ್ಡು ಸರ್ಕಾರಕ್ಕೆ ಪ್ರಸ್ತಾವನೆ ಬರೆದಿದ್ದಾರೆ.
ಪ್ರಮೀಳಾ ನಾಯ್ಡು ಅವರು ಮಾತನಾಡಿದರು ಮನೆಯಲ್ಲಿ ಕೆಲಸದಲ್ಲಿ ತೊಡಗಿಸಿಕೊಂಡ ಮಹಿಳೆಯರಿಗೆ ವೃತ್ತಿಯ ಅಭದ್ರತೆ ಕಾಡುತ್ತಿದೆ. ಕೋವಿಡ್ ವೇಳೆ ಮನೆ ಕೆಲಸವನ್ನು ಕಳೆದುಕೊಂಡ ಒಂದು ಹೊತ್ತಿನ ತುತ್ತಿಗೆ ಪರದಾಡುತ್ತಿದ್ದರು. ಅವರಿಗೆ ಸರ್ಕಾರದಿಂದ ಅಥವಾ ಮನೆಯ ಮಾಲೀಕರಿಂದ ಯಾವುದೇ ರೀತಿಯಾದ ಪರಿಹಾರ ಸಿಕ್ಕಿಲ್ಲ. ಇದರಿಂದ ಅನೇಕರು ಮಹಿಳೆಯರು ತಮ್ಮ ಜೀವ ಕಳೆದುಕೊಳ್ಳಲು ಮುಂದಾಗಿದ್ದರು ಎಂದು ಬೇಸರ ವ್ಯಕ್ತಪಡಿಸಿದರು.
ಕಳೆದ ಎರಡು ವರ್ಷಗಳಿಂದ ರಾಜ್ಯದ ಎನ್‌ಜಿಒ ಹಾಗೂ ಹತ್ತಾರು ಮಹಿಳಾ ಪರವಾಗಿ ಕೆಲಸ ಮಾಡುವ ಸಂಸ್ಥೆಗಳು ಮಹಿಳಾ ಆಯೋಗಕ್ಕೆ, ಮಹಿಳಾ ಮನೆ ಕೆಲಸ ಮಾಡುವವರಿಗೆ ಕಲ್ಯಾಣ ಮಂಡಳಿ ಸ್ಥಾಪಿಸುವಂತೆ ಮನವಿ ಮಾಡಿದ್ದರು. ಕೆಆರ್‌ಪುರಂ ಮನೆ ಕಳ್ಳತನದ ವಿಷಯಕ್ಕೆ ಸಂಬಂಧಿಸಿದಂತೆ ಮನೆಕೆಲಸದಾಕೆಯ ದೂರು ನೀಡಿದ್ದು, ಈ ವೇಳೆ ಪೊಲೀಸರು ಆಕೆ ಮನೆ ತಪಾಸಣೆ ಹಾಗೂ ವಿಚಾರಣೆಗೆ ಒಳಪಡಿಸಿದಾಗ ಆಕೆ ಮಾನಸಿಕವಾಗಿ ನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿತ್ತು. ಈ ಘಟನೆಯ ಬಳಿಕ ಸಭೆ ನಡೆಸಿ ಕಲ್ಯಾಣ ಮಂಡಳಿಯ ಅವಶ್ಯಕತೆ ಅರಿತುಕೊಂಡು ಸರ್ಕಾರಕ್ಕೆ ಮನೆ ಕೆಲಸ ಮಾಡುವ ಮಹಿಳಾ ಕಾರ್ಮಿಕರಿಗೆ ಪ್ರತ್ಯೇಕ ಕಲ್ಯಾಣ ಮಂಡಳಿ ಸ್ಥಾಪಿಸಲು ನಿರ್ಧರಿಸಲಾಗಿದೆ ಎಂದರು.
ನ್ಯಾಯ ಒದಗಿಸುವ ನಿಟ್ಟಿನಲ್ಲಿ ಮಂಡಳಿ ಕಾರ್ಯಾಚರಿಸಲಿದೆ: ಈ ಕಲ್ಯಾಣ ಮಂಡಳಿಯಲ್ಲಿ ಮನೆ ಕೆಲಸದಲ್ಲಿ ತೊಡಗಿಸಿಕೊಂಡಿರುವ ಮಹಿಳೆಯರಿಗೆ ವೃತ್ತಿ ಭದ್ರತೆ, ಆರೋಗ್ಯ ವಿಮೆ, ಅಪಘಾತ ವಿಮೆ, ಆರ್ಥಿಕ ಸೌಲಭ್ಯ ಹಾಗೂ ಅವರ ಮಕ್ಕಳಿಗೆ ಅಗತ್ಯವಿರುವ ಶೈಕ್ಷಣಿಕ ಸಹಾಯ ಸೇರಿದಂತೆ ಅನ್ಯಾಯವಾದ ವೇಳೆ ಅವರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಈ ಮಂಡಳಿ ಕಾರ್ಯಾಚರಿಸಲಿದೆ ಎಂದು ಮಾಹಿತಿ ನೀಡಲಿದೆ ಎಂದು ಹೇಳಿದರು.
ಲೈಂಗಿಕ ಕಾರ್ಯಕರ್ತೆಯರನ್ನು ಪೊಲೀಸರು ಘನತೆಯಿಂದ ನಡೆಸಿಕೊಳ್ಳಬೇಕು:ಲೈಂಗಿಕ ಕಾರ್ಯಕರ್ತೆಯರನ್ನು ಪೊಲೀಸರು ಘನತೆಯಿಂದ ನಡೆಸಿಕೊಳ್ಳಬೇಕು. ದಾಳಿ ಅಥವಾ ವಿಚಾರಣೆ ವೇಳೆ ಅವಾಚ್ಯವಾಗಿ ನಿಂದಿಸಿ, ದೈಹಿಕ ಹಿಂಸೆ ನೀಡಬಾರದು ಎಂದು ಸುಪ್ರೀಂಕೋರ್ಟ್ ನಿರ್ದೇಶನ ನೀಡಿದೆ. ಈ ತೀರ್ಪು ಸ್ವಾಗತಾರ್ಹ. ಲೈಂಗಿಕ ಕಾರ್ಯಕರ್ತೆಯರು ವೃತ್ತಿಯಿಂದ ಹೊರ ಬರಲು ಯತ್ನಿಸುವವರಿಗೆ ಸರ್ಕಾರದ ಸಹಾಯ ಅಗತ್ಯವಾಗಿ ಆಗಬೇಕಾಗಿದೆ. ಅವರ ಜೀವನ ರೂಪಿಸಿಕೊಳ್ಳಲು ಪುನರ್ವಸತಿ ಕಲ್ಪಿಸುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುತ್ತದೆ ಎಂದರು.
ಮಹಿಳಾ ಆಯೋಗದ ಅಧ್ಯಕ್ಷೆಗೆ ನಾರಿ ಪ್ರಶಸ್ತಿ: ಪ್ರಸಕ್ತ ಸಾಲಿನಲ್ಲಿ ದಾದಾ ಸಾಹೇಬ್ ಪಾಲ್ಕೆ ಐಕಾನ್ ಅವಾರ್ಡ್ ಕಾರ್ಯಕ್ರಮದಲ್ಲಿ ಸಮಾಜ ಸೇವೆ ವಿಭಾಗದಲ್ಲಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮೀಳಾ ನಾಯ್ಡು ಅವರು ನಾರಿ ಪ್ರಶಸ್ತಿ ಪಡೆದುಕೊಂಡಿದ್ದಾರೆ.
ಓದಿ:ದೇಶದಲ್ಲಿ ಕಲ್ಲಿದ್ದಲು ಕೊರತೆ ಇಲ್ಲ, ಜನತೆ ಆತಂಕ ಪಡುವ ಅಗತ್ಯವಿಲ್ಲ: ಪ್ರಹ್ಲಾದ್ ಜೋಶಿ ಅಭಯ