ಬೆಂಗಳೂರು: ಕಾಂಗ್ರೆಸ್ ಪೇ ಸಿಎಂ ಅಭಿಯಾನದ ಮೂಲಕ ಬಿಜೆಪಿ ಸರ್ಕಾರವನ್ನು ತೀವ್ರ ಇಕ್ಕಟ್ಟಿಗೆ ಸಿಲುಕಿಸಿರುವ ಹಿನ್ನೆಲೆ "PayCM" Pay to Chief Minister Relief Fund ಹೆಸರಿನಲ್ಲಿ ಮುಖ್ಯಮಂತ್ರಿಗಳ ಪರಿಹಾರ ನಿಧಿಯನ್ನು ಡಿಜಿಟಲ್ ವ್ಯಾಪ್ತಿಗೆ ತರವಂತೆ ಮಾಜಿ ಉಪಸಭಾಪತಿ ಎಂ.ಕೆ ಪ್ರಾಣೇಶ್ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.
ತಮ್ಮ ಪತ್ರದಲ್ಲಿ ಅವರು, ಮುಖ್ಯಮಂತ್ರಿಗಳ ಪರಿಹಾರ ನಿಧಿಯನ್ನು ಡಿಜಿಟಲ್ ಮಾಡುವ ಮುಖಾಂತರ "PayCM" Pay to Chief Minister Relief Fund (CMRF) ಎಂಬ ಹೆಸರಿನಲ್ಲಿ ಕಿಯೋನಿಕ್ಸ್ನಂತಹ ಸಂಸ್ಥೆ ವತಿಯಿಂದ ಒಂದು ಡಿಜಿಟಲ್ ಪೇಮೆಂಟ್ ಆ್ಯಪ್‌ನ್ನು ಸಿದ್ಧಪಡಿಸನೇಕು. ಈ ಆ್ಯಪ್ ಮುಖಾಂತರ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ರಾಜ್ಯದ ಸಾರ್ವಜನಿಕರು, ಸಂಘ-ಸಂಸ್ಥೆಗಳು ತಮ್ಮ ಕೈಲಾದಷ್ಟು ದೇಣಿಗೆ ನೀಡಿ ಸಂಕಷ್ಟದಲ್ಲಿರುವ ರಾಜ್ಯದ ಬಡ ಕುಟುಂಬಗಳ ನೆರವಿಗೆ ಧಾವಿಸಲು ಅವಕಾಶ ಕಲ್ಪಿಸಿ ಕೊಡುವಂತೆ ಮನವಿ ಮಾಡಿದ್ದಾರೆ.