ಬೆಂಗಳೂರು:ದಾವಣಗೆರೆಯ ಹರಿಹರದಲ್ಲಿರುವ ಶ್ರೀ ವಾಲ್ಮೀಕಿ ಮಹಾಸಂಸ್ಥಾನದ ಶ್ರೀ ಪ್ರಸನ್ನಾನಂದಪುರಿ ಮಹಾಸ್ವಾಮಿಗಳು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ಗೆ ಆಶೀರ್ವದಿಸಿದರು. ಸದಾಶಿವನಗರ ನಿವಾಸದಲ್ಲಿ ಮಂಗಳವಾರ ಭೇಟಿ ಮಾಡಿ ಆಶೀರ್ವಾದ ಮಾಡಿದರು.
ಕೆಪಿಸಿಸಿ ಅಧ್ಯಕ್ಷರಾಗಿ ಆಯ್ಕೆಯಾದ ಕಳೆದ ಎರಡು ತಿಂಗಳ ಅವಧಿಯಲ್ಲಿ ಸಾಕಷ್ಟು ರಾಜಕೀಯ ನಾಯಕರು ಹಾಗೂ ಮಠಾಧಿಪತಿಗಳು ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ. ಅಲ್ಲದೆ ಖುದ್ದು ಡಿಕೆಶಿ ಕೂಡ ಹಲವು ರಾಜಕೀಯ ನಾಯಕರನ್ನು ಹಾಗೂ ಮಠಾಧೀಶರನ್ನು ಭೇಟಿ ಮಾಡಿ ಸಮಾಲೋಚಿಸಿದ್ದರು.
ಕಾಂಗ್ರೆಸ್ ಪಕ್ಷದ ಪ್ರಮುಖ ಒಕ್ಕಲಿಗ ನಾಯಕರಾಗಿ ಗುರುತಿಸಿಕೊಂಡಿರುವ ಶಿವಕುಮಾರ್ ಪಕ್ಷ ಸಂಘಟನೆಯ ಮಹತ್ವದ ಜವಾಬ್ದಾರಿ ವಹಿಸಿಕೊಂಡಿದ್ದು, ಎಲ್ಲಾ ಸಮುದಾಯಗಳ ಮುಖಂಡರು ಹಾಗೂ ಮಠಾಧಿಪತಿಗಳನ್ನು ವಿಶ್ವಾಸಕ್ಕೆ ಪಡೆಯುವ ಪ್ರಯತ್ನ ಮಾಡುತ್ತಿದ್ದಾರೆ. 2023ರ ವಿಧಾನಸಭೆ ಚುನಾವಣೆಯಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವ ಸಂಕಲ್ಪದೊಂದಿಗೆ ಅಧಿಕಾರ ವಹಿಸಿಕೊಂಡಿರುವ ಶಿವಕುಮಾರ್, ಹೈಕಮಾಂಡ್ಗೂ ಇದೇ ಭರವಸೆಯನ್ನು ನೀಡಿದ್ದಾರೆ.