ಕರ್ನಾಟಕ

karnataka

ETV Bharat / state

ದಾಖಲಾತಿ ಪರಿಶೀಲನೆ ಹೆಸರಿನಲ್ಲಿ ವಾಹನಗಳನ್ನು ಎಲ್ಲೆಂದರಲ್ಲಿ ತಡೆದು ನಿಲ್ಲಿಸದಿರಿ.. ಪ್ರವೀಣ್ ಸೂದ್ ಸೂಚನೆ - Praveen Sood instruction

ವಾಹನಗಳ ದಾಖಲಾತಿ ಪರಿಶೀಲನೆ ಹೆಸರಿನಲ್ಲಿ ಪೊಲೀಸರು ಎಲ್ಲೆಂದರಲ್ಲಿ ವಾಹನ ಸವಾರರನ್ನು ತಡೆದು ನಿಲ್ಲಿಸದಂತೆ ಪ್ರವೀಣ್ ಸೂದ್ ಸೂಚನೆ ನೀಡಿದ್ದಾರೆ.

Praveen Sood instruction to police commissioner & Joint Commissioner of Traffic
ಸಂಚಾರ ನಿಯಮ ಉಲ್ಲಂಘಿಸಿದ ವಾಹನಗಳನ್ನು ಅನಾವಶ್ಯಕವಾಗಿ ತಡೆದು ನಿಲ್ಲಿಸದಂತೆ ಪ್ರವೀಣ್ ಸೂದ್ ಸೂಚನೆ

By

Published : Jun 27, 2022, 2:00 PM IST

Updated : Jun 27, 2022, 5:12 PM IST

ಬೆಂಗಳೂರು: ನಗರದಲ್ಲಿ ಇನ್ನು ಮುಂದೆ ವಾಹನಗಳ ದಾಖಲಾತಿ ಪರಿಶೀಲನೆ ಹೆಸರಿನಲ್ಲಿ ಪೊಲೀಸರು ಎಲ್ಲೆಂದರಲ್ಲಿ ವಾಹನ ಸವಾರರನ್ನು ತಡೆದು ನಿಲ್ಲಿಸದಂತೆ ರಾಜ್ಯ ಪೊಲೀಸ್ ಇಲಾಖೆಯ ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್ ಸೂಚನೆ ನೀಡಿದ್ದಾರೆ.

'ರಸ್ತೆಯಲ್ಲಿ ಎಲ್ಲೆಂದರಲ್ಲಿ ವಾಹನ ತಡೆದು ಪರಿಶೀಲನೆ ನಡೆಸುವ ಪೊಲೀಸರ ಕ್ರಮದ' ಕುರಿತು ಟ್ವಿಟರ್ ಬಳಕೆದಾರರೊಬ್ಬರು ಉಲ್ಲೇಖಿಸಿದ್ದರು. ಈ ಹಿಂದೆ ಸಂಚಾರ ವಿಭಾಗದ ಎಸಿಪಿಯಾಗಿದ್ದ ಪ್ರವೀಣ್ ಸೂದ್ 'ದಾಖಲೆಗಳ ಪರಿಶೀಲನೆ ಹೆಸರಿನಲ್ಲಿ ಅನಾವಶ್ಯಕವಾಗಿ ವಾಹನಗಳನ್ನು ತಡೆದು ನಿಲ್ಲಿಸುವುದಕ್ಕೆ ಬ್ರೇಕ್ ಹಾಕಿದ್ದರು. ಈಗ ಡಿಜಿ, ಐಜಿಪಿಯಾಗಿರುವ ಅವರಿಂದ ಮತ್ತೊಮ್ಮೆ ಅದೇ ನಿಯಮ ನಿರೀಕ್ಷಿಸಬಹುದೇ' ಟ್ವೀಟ್​ ಮಾಡಿದವರು ಉಲ್ಲೇಖಿಸಿದ್ದರು.

ಈ ಟ್ವೀಟ್​ಗೆ ಪ್ರತಿಕ್ರಿಯಿಸಿರುವ ಪ್ರವೀಣ್ ಸೂದ್ 'ಸಂಚಾರ ನಿಯಮಗಳನ್ನು ಉಲ್ಲಂಘಿಸಿದ ವಾಹನಗಳನ್ನು ದಾಖಲಾತಿ ಪರಿಶೀಲನೆ ಹೆಸರಿನಲ್ಲಿ ಅನಾವಶ್ಯಕವಾಗಿ ತಡೆಯದಂತೆ' ಸೂಚಿಸಿದ್ದು, ಕೇವಲ ಡ್ರಿಂಕ್ ಆ್ಯಂಡ್ ಡ್ರೈವ್ ಪರಿಶೀಲಿಸಬಹುದು ಎಂದು ನಗರ ಪೊಲೀಸ್ ಆಯುಕ್ತರು ಹಾಗೂ ಸಂಚಾರ ವಿಭಾಗದ ಜಂಟಿ ಆಯುಕ್ತರಿಗೆ ಟ್ಯಾಗ್ ಮಾಡುವ ಮೂಲಕ ಸೂಚಿಸಿದ್ದಾರೆ.

ಇದನ್ನೂ ಓದಿ:ಸಗಟು, ಚಿಲ್ಲರೆ ಪೂರೈಕೆದಾರರಿಂದ ಡೀಸೆಲ್ ಬಂದ್.. ಬಿಎಂಟಿಸಿ ಬಸ್​ಗಳ ಸಂಚಾರದಲ್ಲಿ ವ್ಯತ್ಯಯ

Last Updated : Jun 27, 2022, 5:12 PM IST

ABOUT THE AUTHOR

...view details