ಕರ್ನಾಟಕ

karnataka

ETV Bharat / state

ಹಿಜಾಬ್ ವಿವಾದ: ಪಿಯು ಬೋರ್ಡ್ ನಿರ್ದೇಶಕಿ ಸ್ನೇಹಲ್ ತಲೆದಂಡವಾಯ್ತಾ? - pre-university examination Director Snehal transfer

ಹಿಜಾಬ್ ಕೇಸರಿ ಶಾಲು ವಿವಾದ ಬೆನ್ನಲ್ಲೇ ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕಿ ಸ್ನೇಹಲ್ ಅವರನ್ನು ದಿಢೀರ್ ವರ್ಗಾವಣೆ ಮಾಡಲಾಗಿದೆ‌.

pre-university examination Director Snehal transfer
ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕಿ ಸ್ನೇಹಲ್

By

Published : Feb 6, 2022, 2:08 PM IST

ಬೆಂಗಳೂರು: ರಾಜ್ಯದಲ್ಲಿ ಹಿಜಾಬ್-ಕೇಸರಿ ವಿವಾದ ಹಿನ್ನೆಲೆ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಿಗೆ ಸಮವಸ್ತ್ರ ಕಡ್ಡಾಯಗೊಳಿಸಿ ಪದವಿ ಪೂರ್ವ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಕರ್ನಾಟಕ ಶಿಕ್ಷಣ ಕಾಯ್ದೆ 1983 ಅನ್ವಯ ವಸ್ತ್ರಸಂಹಿತೆ ಜಾರಿ ಮಾಡಲಾಗಿದೆ. ಹೈಕೋರ್ಟ್ ತೀರ್ಪು ಬರುವವರಿಗೆ ಈ ವಸ್ತ್ರ ಸಂಹಿತೆ ಪಾಲಿಸಬೇಕು ಎಂದು ಆದೇಶಿಸಲಾಗಿದೆ.

ಈ ಆದೇಶದ ಬೆನ್ನಲ್ಲೇ ಇದೀಗ ಹಿಜಾಬ್ ಹಾಗೂ ಕೇಸರಿ ವಿವಾದಕ್ಕೆ ಪಿಯು ಬೋರ್ಡ್ ನಿರ್ದೇಶಕಿ ಆರ್.ಸ್ನೇಹಲ್ ತಲೆದಂಡವಾಯ್ತಾ? ಅನ್ನೋ ಪ್ರಶ್ನೆ ಕಾಡ್ತಿದೆ. ಸದ್ಯ ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕಿ ಸ್ನೇಹಲ್ ದಿಢೀರ್ ವರ್ಗಾವಣೆ ಮಾಡಲಾಗಿದೆ‌.

ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕಿ ಸ್ನೇಹಲ್ ವರ್ಗಾವಣೆ

ಪಿಯು ಕಾಲೇಜು ನಿರ್ದೇಶಕರ ಸ್ಥಾನಕ್ಕೆ ಬೀದರ್ ಡಿಸಿಯಾಗಿದ್ದ ರಾಮಚಂದ್ರನ್ ಅವರನ್ನು ನೂತನ ನಿರ್ದೇಶಕರಾಗಿ ನೇಮಕ ಮಾಡಲಾಗಿದೆ. ಹಿಜಾಬ್ ಹೋರಾಟ ತೀವ್ರ ಸ್ವರೂಪ ಪಡೆದರೂ ನಿಯಂತ್ರಣಕ್ಕೆ ಸೂಕ್ತ ಕ್ರಮ ವಹಿಸದ ಕಾರಣ ಸ್ನೇಹಲ್ ಅವರನ್ನು ವರ್ಗಾವಣೆ ಮಾಡಿರುವ ಸಾಧ್ಯತೆ ಇದೆ‌‌ ಎನ್ನಲಾಗ್ತಿದೆ.

ಇದನ್ನೂ ಓದಿ:ಹೆಣ್ಣು ಮಕ್ಕಳಿಗಾಗಿ ಓಬವ್ವ ಆತ್ಮರಕ್ಷಣಾ ಕಲಾ ಕೌಶಲ್ಯ ತರಬೇತಿ ಕಾರ್ಯಕ್ರಮಕ್ಕೆ ಸಿಎಂ ಚಾಲನೆ

ABOUT THE AUTHOR

...view details