ಬೆಂಗಳೂರು :ಕೇರಳದಲ್ಲಿ ನಿಫಾ ವೈರಸ್ ಪತ್ತೆಯಾಗಿರುವುದರಿಂದ ಇದೀಗ ಕರ್ನಾಟಕದಲ್ಲಿ ಕಟ್ಟೆಚ್ಚರ ವಹಿಸುವಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಕೇರಳದ ಗಡಿಭಾಗದ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಮೈಸೂರು, ಕೊಡುಗು ಹಾಗೂ ಚಾಮರಾಜನಗರ ಭಾಗದ ಜಿಲ್ಲಾಧಿಕಾರಿಗಳು ವಿಶೇಷ ಎಚ್ಚರಿಕೆ ವಹಿಸುವಂತೆ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಜಾವೇದ್ ಅಕ್ತರ್ ಆದೇಶಿಸಿದ್ದಾರೆ.
ಕೇರಳದಿಂದ ಬರುವವರಿಗೆ ಅನಾರೋಗ್ಯ ಸಮಸ್ಯೆ ಕಂಡು ಬಂದರೆ ಅವರ ಮೇಲೆ ತೀವ್ರ ನಿಗಾವಹಿಸುವಂತೆ ಸೂಚಿಸಲಾಗಿದೆ. ಕರ್ನಾಟಕ ಸರ್ಕಾರವು ಜನರು ಅಕ್ಟೋಬರ್ ಅಂತ್ಯದವರೆಗೆ ಕೇರಳಕ್ಕೆ ಭೇಟಿ ನೀಡುವುದನ್ನು ತಪ್ಪಿಸಬೇಕು ಎಂದು ಹೇಳಿದೆ.
ನಿಫಾ ವೈರಸ್ ಜ್ವರದ ಲಕ್ಷಣಗಳು:
- ಜ್ವರ, ತಲೆ ನೋವು, ವಾಂತಿ, ತಲೆಸುತ್ತುವಿಕೆ ಬರುವುದು
- ಪ್ರಜ್ಞಾಹೀನತೆಗೆ ಒಳಗಾಗುವುದು
- ಅತಿಯಾದ ಜ್ವರ ಮೆದುಳಿಗೆ ವ್ಯಾಪಿಸುವುದು
- ಮಾತುಗಳಲ್ಲಿ ತೊದಲುವಿಕೆ ಹಾಗೂ ಅಪಸ್ವರದ ಲಕ್ಷಣಗಳು ಕಾಣಿಸಿವುದು
- ಕೆಲವು ಬಾರಿ ಸೂಕ್ತ ಚಿಕಿತ್ಸೆ ಲಭಿಸದಿದ್ದರೆ ಸಾವು ಸಂಭವಿಸಬಹುದು
- ಸೋಂಕಿತ ದಿನದಿಂದ 4-18ದಿನಗಳಲ್ಲಿ ನಿಪಾ ವೈರೆಸ್ ರೋಗದ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ.