ಬೆಂಗಳೂರು: ಗಾಂಧಿಬಜಾರ್ ಪ್ರದೇಶವನ್ನು ಪಾದಚಾರಿ ಸ್ನೇಹಿ ಮಾಡಲು ಸಿದ್ಧತೆ ನಡೆಸಲಾಗಿದೆ. ಇಂದು ಈ ಬಗ್ಗೆ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜು, ಶಾಸಕ ಉದಯ್ ಬಿ. ಗರುಡಾಚಾರ್, ಡಲ್ಟ್ ಆಯುಕ್ತರಾದ ಮಂಜುಳಾ, ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಸಭೆ ನಡೆಸಿದರು.
ಗಾಂಧಿಬಜಾರ್ ರಸ್ತೆಗಳಲ್ಲಿ ವಾಹನ ಸಂಚಾರ ನಿಷೇಧಕ್ಕೆ ಸಿದ್ಧತೆ - bangalore latest news
700 ಮೀಟರ್ ಉದ್ದದ ರಸ್ತೆಯಲ್ಲಿ ಬೆಳಗ್ಗೆಯಿಂದ ರಾತ್ರಿಯವರೆಗೆ ವಾಹನ ಸಂಚಾರವನ್ನು ನಿಷೇಧಿಸಿ, ಎಲೆಕ್ಟ್ರಿಕ್ ವಾಹನ, ಸೈಕಲ್ ಹಾಗೂ ಪಾದಚಾರಿಗಳ ಸಂಚಾರಕ್ಕೆ ಮಾತ್ರ ಅವಕಾಶ ಕಲ್ಪಿಸಲು ಯೋಜನೆ ರೂಪಿಸಲಾಗಿದೆ. ಈ ಸಂಬಂಧ ಸ್ಥಳೀಯವಾಗಿ ಜನಾಭಿಪ್ರಾಯ ಸಂಗ್ರಹಿಸಿ ಯೋಜನೆಗೆ ಅಂತಿಮ ರೂಪುರೇಷೆ ನೀಡಲು ಆಯುಕ್ತ ಎನ್.ಮಂಜುನಾಥ್ ಪ್ರಸಾದ್ ಡಲ್ಟ್ ಅಧಿಕಾರಿಗಳಿಗೆ ತಿಳಿಸಿದರು.
ಗಾಂಧಿಬಜಾರ್ ಅನ್ನು ಪಾದಚಾರಿ ಸ್ನೇಹಿ ತಾಣವನ್ನಾಗಿ ರೂಪಿಸಲು ನಗರ ಭೂಸಾರಿಗೆ ನಿರ್ದೇಶನಾಲಯ (ಡಲ್ಟ್) ಯೋಜನೆ ಸಿದ್ದಪಡಿಸಿದ್ದು, ಟ್ಯಾಗೋರ್ ಪಾರ್ಕ್ ವೃತ್ತದಿಂದ ರಾಮಕೃಷ್ಣ ಆಶ್ರಮವರೆಗಿನ ಸುಮಾರು 700 ಮೀಟರ್ ಉದ್ದದ ರಸ್ತೆಯಲ್ಲಿ ಬೆಳಗ್ಗೆಯಿಂದ ರಾತ್ರಿಯವರೆಗೆ ವಾಹನ ಸಂಚಾರ ನಿಷೇಧಿಸಿ, ಎಲೆಕ್ಟ್ರಿಕ್ ವಾಹನ, ಸೈಕಲ್ ಹಾಗೂ ಪಾದಚಾರಿಗಳ ಸಂಚಾರಕ್ಕೆ ಮಾತ್ರ ಅವಕಾಶ ಕಲ್ಪಿಸಲು ಯೋಜನೆ ರೂಪಿಸಲಾಗಿದೆ. ಈ ಸಂಬಂಧ ಸ್ಥಳೀಯವಾಗಿ ಜನಾಭಿಪ್ರಾಯವನ್ನು ಸಂಗ್ರಹಿಸಿ ಯೋಜನೆಗೆ ಅಂತಿಮ ರೂಪುರೇಷೆ ನೀಡಲು ಆಯುಕ್ತರು ಎನ್. ಮಂಜುನಾಥ್ ಪ್ರಸಾದ್ ಡಲ್ಟ್ ಅಧಿಕಾರಿಗಳಿಗೆ ತಿಳಿಸಿದರು.
ಗಾಂಧಿಬಜಾರ್ ರಸ್ತೆಯಲ್ಲಿ ಹೂವು, ಹಣ್ಣು, ತರಕಾರಿ, ಪೂಜಾ ಸಾಮಗ್ರಿಗಳು ಸೇರಿದಂತೆ ಇನ್ನಿತರೆ ಚಟುವಟಿಕೆಗಳ ಪ್ರಮುಖ ತಾಣವಾಗಿದೆ. ಇಲ್ಲಿ ಬೀದಿ ಬದಿ ವ್ಯಾಪಾರಿಗಳು ಹೆಚ್ಚಿದ್ದು, ಪಾದಚಾರಿ ಮಾರ್ಗದಲ್ಲಿ ವ್ಯಾಪಾರ ಮಾಡುತ್ತಿರುವುದರಿಂದ ಹೆಚ್ಚು ಸಂಚಾರ ದಟ್ಟಣೆಯಾಗುತ್ತಿದೆ. ಆದ್ದರಿಂದ ಸದ್ಯ ಆಗುತ್ತಿರುವ ಸಂಚಾರ ದಟ್ಟಣೆಯನ್ನು ತಡೆದು ಸುಸಜ್ಜಿತ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಿ ಪಾದಚಾರಿ ಸ್ನೇಹಿಯಾಗಿ ಮಾಡಿ ಸಾರ್ವಜನಿಕರಿಗೆ ಹೆಚ್ಚು ಅನುಕೂಲ ಮಾಡಿಕೊಡುವುದು ಈ ಯೋಜನೆಯ ಪ್ರಮುಖ ಉದ್ದೇಶವಾಗಿದೆ ಎಂದರು.