ಬೆಂಗಳೂರು :ಡಾ.ರಾಜ್ ಕುಮಾರ್ ಸ್ಮಾರಕದ ಬಳಿ ತಂದೆ-ತಾಯಿ ಪಕ್ಕದಲ್ಲಿಯೇ ನಟ ಪುನೀತ್ ರಾಜ್ಕುಮಾರ್ ಅಂತ್ಯ ಸಂಸ್ಕಸಾರಕ್ಕೆ ಎಲ್ಲಾ ಸಿದ್ದತೆಗಳು ನಡೆದಿವೆ. ನಾಳೆ ಬೆಳಗ್ಗೆ ಕುಟುಂಬದ ಆಶಯದಂತೆ ಅಂತ್ಯ ಸಂಸ್ಕಾರ ನಡೆಸಲಾಗುತ್ತದೆ.
ಪುನೀತ್ ರಾಜ್ಕುಮಾರ್ ಅಂತ್ಯ ಸಂಸ್ಕಾರಕ್ಕೆ ಸಿದ್ದತೆ ರಾಜ್ ಕುಮಾರ್ ಸ್ಮಾರಕದಲ್ಲಿ ಡಾ.ರಾಜ್ ಸಮಾಧಿ ಇದ್ದು, ಅದರ ಪಕ್ಕದಲ್ಲೇ ರಾಜ್ ಪತ್ನಿ ಪಾರ್ವತಮ್ಮ ರಾಜ್ ಕುಮಾರ್ ಸಮಾಧಿ ಇದೆ. ಈಗ ಪಾರ್ವತಮ್ಮ ಸಮಾಧಿ ಪಕ್ಕದಲ್ಲೇ ಪುನೀತ್ ರಾಜ್ ಕುಮಾರ್ ಸಮಾಧಿ ಮಾಡಲು ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.
ಈ ಕುರಿತು ಮಾಹಿತಿ ನೀಡಿದ ಸಚಿವ ಗೋಪಾಲಯ್ಯ, ಪುನೀತ್ ರಾಜ್ ಕುಮಾರ್ ಅಂತ್ಯ ಸಂಸ್ಕಾರಕ್ಕೆ ಎಲ್ಲಾ ಸಿದ್ಧತೆ ನಡೆದಿದೆ. ಇಂದು ಸಂಜೆ ಅಂತ್ಯ ಸಂಸ್ಕಾರ ಮಾಡಬೇಕಿತ್ತು. ಆದರೆ, ಅಭಿಮಾನಿಗಳ ದರ್ಶನ ಮುಗಿದಿಲ್ಲ. ಸಾಕಷ್ಟು ಸಂಖ್ಯೆಯ ಅಭಿಮಾನಿಗಳು ಅಂತಿಮ ದರ್ಶನಕ್ಕೆ ಕಾದಿದ್ದಾರೆ.
ಹಾಗಾಗಿ, ಇಂದು ರಾತ್ರಿಯಿಡೀ ಸಾರ್ವಜನಿಕ ದರ್ಶನಕ್ಕೆ ಅವಕಾಶ ನೀಡಲು ಸಿಎಂ ನಿರ್ಧರಿಸಿದ್ದಾರೆ. ರಾಜ್ ಕುಟುಂಬದೊಂದಿಗೆ ಚರ್ಚಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ. ನಾಳೆ ಅಂತ್ಯ ಸಂಸ್ಕಾರ ನಡೆಸಲಾಗುತ್ತದೆ ಎಂದರು.