ಕರ್ನಾಟಕ

karnataka

ETV Bharat / state

ವಿಧಾನಮಂಡಲ ಅಧಿವೇಶನಕ್ಕೆ ಸಕಲ ಸಿದ್ಧತೆ, ಕೋವಿಡ್ ಪರೀಕ್ಷೆ ಕಡ್ಡಾಯ - ಬೆಂಗಳೂರು ಇತ್ತೀಚಿನ ಸುದ್ದಿ

ವಿಧಾನಸಭೆ ಹಾಗೂ ವಿಧಾನ ಪರಿಷತ್ತಿಗೆ ಪ್ರವೇಶಿಸುವ ಸಚಿವರು, ಶಾಸಕರು, ವಿಧಾನಪರಿಷತ್ ಸದಸ್ಯರು ಹಾಗೂ ಅಧಿಕಾರಿಗಳು, ಸಿಬ್ಬಂದಿ ವರ್ಗ ಎಲ್ಲರೂ ಕಡ್ಡಾಯವಾಗಿ ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಲು ಸೂಚಿಸಲಾಗಿದೆ. ಹಾಗಾಗಿ, ಇಂದಿನಿಂದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್​ನಲ್ಲಿ ಕೋವಿಡ್ ಪರೀಕ್ಷೆಗೆ ಸರ್ಕಾರ ವ್ಯವಸ್ಥೆ ಮಾಡಿದೆ..

Preparing for the vidhanamandala session
ವಿಧಾನಮಂಡಲ ಅಧಿವೇಶನಕ್ಕೆ ಸಕಲ ಸಿದ್ಧತೆ

By

Published : Sep 18, 2020, 5:10 PM IST

ಬೆಂಗಳೂರು: ವಿಧಾನಮಂಡಲ ಅಧಿವೇಶನ ಸೋಮವಾರದಿಂದ (ಸೆ. 21) ಆರಂಭವಾಗುತ್ತಿರುವ ಹಿನ್ನೆಲೆ ಕಲಾಪಕ್ಕೆ ಸಕಲ ಸಿದ್ಧತೆ ನಡೆಯುತ್ತಿವೆ. ಕೋವಿಡ್ ನಡುವೆಯೂ ವಿಧಾನಸಭೆ ಅಧಿವೇಶನ ನಡೆಸುವ ಸಂಬಂಧ ಸರ್ಕಾರ ಅಗತ್ಯ ಕಟ್ಟುನಿಟ್ಟಿನ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುತ್ತಿದೆ. ವಿಧಾನಸಭೆ ಹಾಗೂ ವಿಧಾನ ಪರಿಷತ್ ಕಲಾಪ ಸೋಮವಾರ ಬೆಳಗ್ಗೆ 11ಕ್ಕೆ ಆರಂಭವಾಗಲಿದೆ.

ವಿಧಾನಸೌಧದ ಮೆಟ್ಟಿಲುಗಳ ಮೇಲೆ ಹೂಕುಂಡ ಸೇರಿ ವಿವಿಧ ಅಲಂಕಾರಿಕ ಗಿಡಗಳನ್ನು ಇರಿಸಲಾಗುತ್ತಿದೆ. ಶನಿವಾರ ಅಥವಾ ಭಾನುವಾರ ಎರಡೂ ಸದನಗಳಲ್ಲಿ ಸ್ಯಾನಿಟೈಸರ್ ಸಿಂಪಡಿಸಲಾಗುತ್ತದೆ. ಈ ಬಾರಿ ವಿಧಾನಸಭೆಯೊಳಗೆ ಕ್ಯಾಂಟೀನ್ ವ್ಯವಸ್ಥೆ ಇರಲ್ಲ. ಅದರ ಬದಲಾಗಿ ಸದನದ ಹೊರಗೆ ಕ್ಯಾಂಟೀನ್ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಕೊರೊನಾ ಹಿನ್ನೆಲೆ ಸಚಿವರು, ಶಾಸಕರ ಅಪ್ತ ಕಾರ್ಯದರ್ಶಿಗಳು, ಗನ್‌ಮ್ಯಾನ್‌ಗಳನ್ನು ಮೊದಲ ಮಹಡಿಗೆ ಬಿಡುವುದಿಲ್ಲ. ಹಾಗಾಗಿ, ಅವರಿಗೆ ಕೆಳಗೆ ವ್ಯವಸ್ಥೆ ಮಾಡಲಾಗಿದೆ.

ವಿಧಾನಮಂಡಲ ಅಧಿವೇಶನಕ್ಕೆ ಸಕಲ ಸಿದ್ಧತೆ

ಕೋವಿಡ್ ಟೆಸ್ಟ್ ಕಡ್ಡಾಯ :ವಿಧಾನಸಭೆ ಹಾಗೂ ವಿಧಾನ ಪರಿಷತ್ತಿಗೆ ಪ್ರವೇಶಿಸುವ ಸಚಿವರು, ಶಾಸಕರು, ವಿಧಾನಪರಿಷತ್ ಸದಸ್ಯರು ಹಾಗೂ ಅಧಿಕಾರಿಗಳು, ಸಿಬ್ಬಂದಿ ವರ್ಗ ಎಲ್ಲರೂ ಕಡ್ಡಾಯವಾಗಿ ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಲು ಸೂಚಿಸಲಾಗಿದೆ. ಹಾಗಾಗಿ, ಇಂದಿನಿಂದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್​ನಲ್ಲಿ ಕೋವಿಡ್ ಪರೀಕ್ಷೆಗೆ ಸರ್ಕಾರ ವ್ಯವಸ್ಥೆ ಮಾಡಿದೆ. ಈಗಾಗಲೇ ವಿಧಾನ ಪರಿಷತ್ ಸದಸ್ಯರಾದ ನಜೀರ್ ಅಹ್ಮದ್, ಪ್ರಕಾಶ್ ರಾಥೋಡ್ ಸೇರಿ ಹಲವು ಸದಸ್ಯರು, ಶಾಸಕರು, ಅಧಿಕಾರಿಗಳು, ನೌಕರರು ಹಾಗೂ ಪತ್ರಕರ್ತರು ಕೋವಿಡ್ ಟೆಸ್ಟ್ ಮಾಡಿಸಿಕೊಂಡಿದ್ದಾರೆ. ನಾಳೆಯೂ ಸಹ ಇದರ ಪರೀಕ್ಷೆ ಮಾಡಲಾಗುತ್ತದೆ. ಹತ್ತು ದಿನಗಳ ಕಾಲ ನಡೆಯಲಿರುವ ಅಧಿವೇಶನಕ್ಕೆ ಭಾರೀ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗುತ್ತಿದೆ.

ABOUT THE AUTHOR

...view details