ಬೆಂಗಳೂರು :ರಾಜ್ಯ ರಾಜಕಾರಣದಲ್ಲಿ ಕುತೂಹಲದ ಬೆಳವಣಿಗೆ ನಡೆಯುತ್ತಲೇ ಇದೆ. ಒಂದೆಡೆ ಮುಖ್ಯಮಂತ್ರಿ ಆಯ್ಕೆಗೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯುತ್ತಿದ್ದರೆ, ನೂತನ ಸಿಎಂ ಪ್ರಮಾಣವಚನ ಸಮಾರಂಭಕ್ಕೆ ರಾಜಭವನ ಸಿದ್ಧಗೊಂಡಿದೆ.
ನಾಳೆ ಅಥವಾ ನಾಡಿದ್ದು ಬಹುತೇಕವಾಗಿ ಹೊಸ ಮುಖ್ಯಮಂತ್ರಿ ಮತ್ತು ಸಚಿವರ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದೆ. ರಾಜ್ಯಪಾಲರ ನಿರ್ದೇಶನದ ಪ್ರಕಾರ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಅವರು ರಾಜಭವನದ ಆವರಣದಲ್ಲಿ ಹೊಸ ಮುಖ್ಯಮಂತ್ರಿಗಳ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಸಕಲ ಸಿದ್ಧತೆ ನಡೆಸಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಆ ಪ್ರಕಾರ ಗಾಜಿನ ಮನೆಯಲ್ಲಿ ಭರದ ಸಿದ್ಧತೆ ಮಾಡಲಾಗುತ್ತಿದೆ.
ಇದನ್ನೂ ಓದಿ:ಲಿಂಗಾಯತರಿಗೆ ಸಿಎಂ ಸ್ಥಾನ ನೀಡಲು ಹೆಚ್ಚಿದ ಒತ್ತಡ: ಬೊಮ್ಮಾಯಿ ಮೇಲೆ ಬಿಎಸ್‌ವೈ ಒಲವು, ಬೆಲ್ಲದ್‌ಗೆ RSS ಬೆಂಬಲ