ಬೆಂಗಳೂರು: ರಾಜ್ಯ ಸರ್ಕಾರ ವಕೀಲರ ಕಲ್ಯಾಣ ನಿಧಿಗೆ 5 ಕೋಟಿ ರೂ. ಬಿಡುಗಡೆ ಮಾಡಿದ್ದಕ್ಕೆ ರಾಜ್ಯದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ವಕೀಲರ ಸಂಘ ಧನ್ಯವಾದ ಸಲ್ಲಿಸಿದೆ.
ವಕೀಲರ ಕಲ್ಯಾಣ ನಿಧಿಗೆ 5 ಕೋಟಿ ರೂ. ಬಿಡುಗಡೆ: ಸಿಎಂಗೆ ಧನ್ಯವಾದ ಸಲ್ಲಿಸಿದ ವಕೀಲರ ಸಂಘದ ಅಧ್ಯಕ್ಷ - ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಪತ್ರ
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಪತ್ರ ಬರೆದ ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ, ಜೆಡಿಎಸ್ ಮುಖಂಡ ಎ.ಪಿ. ರಂಗನಾಥ್, ವಕೀಲರ ಸಂಘದ ಪರವಾಗಿ ಧನ್ಯವಾದ ಸಲ್ಲಿಸಿದ್ದಾರೆ.
ಈ ಕುರಿತು ಪತ್ರ ಬರೆದಿರುವ ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ, ಜೆಡಿಎಸ್ ಮುಖಂಡ ಎ.ಪಿ. ರಂಗನಾಥ್, ವಕೀಲರ ಸಂಘದ ಪರವಾಗಿ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.
ಮುಖ್ಯಮಂತ್ರಿಗಳು ಕೊರೊನಾ ಸೋಂಕಿನಿಂದ ಮೃತಪಟ್ಟ ವಕೀಲರ ಕುಟುಂಬಗಳಿಗೆ ಪರಿಹಾರ ಮತ್ತು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮತ್ತು ಲಾಕ್ಡೌನ್ನಿಂದ ಸಂಕಷ್ಟಕ್ಕೆ ಸಿಲುಕಿದ ವಕೀಲರಿಗೆ ಆರ್ಥಿಕ ನೆರವು ನೀಡಲು ಕಾನೂನು ಇಲಾಖೆ ಕಾರ್ಯದರ್ಶಿ, ಅಡ್ವೋಕೇಟ್ ಜನರಲ್, ಬಾರ್ ಕೌನ್ಸಿಲ್ ಅಧ್ಯಕ್ಷರು, ಬೆಂಗಳೂರು ವಕೀಲರ ಸಂಘದ ಅಧ್ಯಕ್ಷರು ಮತ್ತು ಕೆಲವು ವಕೀಲರ ಸಂಘಗಳ ಅಧ್ಯಕ್ಷರನ್ನೊಳಗಂಡ ಸಮಿತಿಯೊಂದನ್ನು ರಚಿಸಿ ಅರ್ಹ ವಕೀಲರಿಗೆ ನೆರವು ದೊರೆಯುವಂತೆ ಮಾಡಬೇಕೆಂದು ಮನವಿ ಮಾಡಿದ್ದಾರೆ.