ಕರ್ನಾಟಕ

karnataka

ETV Bharat / state

ಮೂರು ದಿನಗಳ ಪ್ರವಾಸಕ್ಕೆ ಆಗಮಿಸಿದ ರಾಷ್ಟ್ರಪತಿಗಳನ್ನು ಸ್ವಾಗತಿಸಿದ ಸಿಎಂ - president ramanath covind visits bengalore

ನಾಳೆ ನಾನು ದಸರಾ ಉದ್ಘಾಟನೆಯಲ್ಲಿ ಭಾಗವಹಿಸುತ್ತೇನೆ. ಎಸ್.ಎಂ ಕೃಷ್ಣ ಅವರು ದಸರಾ ಉದ್ಘಾಟನೆ ಮಾಡಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

president-ram-nath-kovind-visits-bengalore
ರಾಷ್ಟ್ರಪತಿಗಳನ್ನು ಸ್ವಾಗತಿಸಿದ ಸಿಎಂ ಬೊಮ್ಮಾಯಿ

By

Published : Oct 6, 2021, 3:21 PM IST

ಬೆಂಗಳೂರು: ಮೂರು ದಿನಗಳ ಭೇಟಿಗೆ ರಾಜ್ಯಕ್ಕೆ ಆಗಮಿಸಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಗರದ ಎಚ್ಎಎಲ್ ವಿಮಾನನಿಲ್ದಾಣದಲ್ಲಿ ಆತ್ಮೀಯವಾಗಿ ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ರಾಷ್ಟ್ರಪತಿಗಳಿಗೆ ಶಾಲು ಹೊದಿಸಿ ಸರ್ಕಾರದ ಪರವಾಗಿ ಸನ್ಮಾನಿಸಿದರು. ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಈ ವೇಳೆ, ಮಾಧ್ಯಮದೊಂದಿಗೆ ಮಾತನಾಡಿದ ಸಿಎಂ ನಾಳೆ ನಾನು ದಸರಾ ಉದ್ಘಾಟನೆಯಲ್ಲಿ ಭಾಗವಹಿಸುತ್ತೇನೆ. ಎಸ್.ಎಂ ಕೃಷ್ಣ ಅವರು ದಸರಾ ಉದ್ಘಾಟನೆ ಮಾಡಲಿದ್ದಾರೆ. ನಂತರ ರಾಷ್ಟ್ರಪತಿಗಳನ್ನು ಬರಮಾಡಿಕೊಂಡು ಚಾಮರಾಜನಗರಕ್ಕೆ ಹೋಗುತ್ತೇನೆ. ಅಲ್ಲಿ ಆಸ್ಪತ್ರೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸುತ್ತೇನೆ ಎಂದರು.

ಆರ್​ಎಸ್​ಎಸ್​ ಕುರಿತ ಹೆಚ್​ಡಿಕೆ ಹೇಳಿಕೆ ವಿಚಾರದ ಕುರಿತು ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಸಿಎಂ, ಅದರ ಬಗ್ಗೆ ಆಮೇಲೆ ಮಾತಾಡುತ್ತೇನೆ ಎಂದು ನಿರ್ಗಮಿಸಿದರು.

ಓದಿ:'ರಾಜಕಾರಣಕ್ಕಾಗಿ ಆರ್​ಎಸ್​ಎಸ್ ದೂಷಿಸುವುದು ಕೆಲವು ರಾಜಕಾರಣಿಗಳ ಚಾಳಿ'

For All Latest Updates

TAGGED:

ABOUT THE AUTHOR

...view details