ಬೆಂಗಳೂರು: ರಾಷ್ಟ್ರಪತಿ ರಾಮನಾಥ್ ಕೋವಿಂದ್ ನಾಲ್ಕು ದಿನಗಳ ಅಧಿಕೃತ ರಾಜ್ಯ ಭೇಟಿಯನ್ನು ಮುಕ್ತಾಯಗೊಳಿಸಿ ಭಾರತೀಯ ವಾಯುಪಡೆಯ ವಿಶೇಷ ವಿಮಾನದಲ್ಲಿ ನವದೆಹಲಿಗೆ ತೆರಳಿದರು.
ಕರ್ನಾಟಕ ಪ್ರವಾಸ ಮುಗಿಸಿ ನವದೆಹಲಿಗೆ ಮರಳಿದ ರಾಷ್ಟ್ರಪತಿ ಕೋವಿಂದ್ - Ramanath Kovind
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಧಿಕೃತ ರಾಜ್ಯ ಪ್ರವಾಸವನ್ನು ಮುಗಿಸಿ ವಿಶೇಷ ವಿಮಾನದಲ್ಲಿ ನವದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.
![ಕರ್ನಾಟಕ ಪ್ರವಾಸ ಮುಗಿಸಿ ನವದೆಹಲಿಗೆ ಮರಳಿದ ರಾಷ್ಟ್ರಪತಿ ಕೋವಿಂದ್ President Ramanath Kovind concludes tour of Karnataka](https://etvbharatimages.akamaized.net/etvbharat/prod-images/768-512-10537224-thumbnail-3x2-vis.jpg)
ರಾಷ್ಟ್ರಪತಿ ಕೋವಿಂದ್ ನವದೆಹಲಿಗೆ ಪ್ರಯಾಣ
ರಾಷ್ಟ್ರದ ಪ್ರಥಮ ಮಹಿಳೆ ಸವಿತಾ ಕೋವಿಂದ್ ರಾಷ್ಟ್ರಪತಿ ಜೊತೆಯಲ್ಲಿ ಪ್ರಯಾಣ ಬೆಳೆಸಿದರು. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೆಚ್ಎಎಲ್ ವಿಮಾನ ನಿಲ್ದಾಣದಲ್ಲಿ ರಾಷ್ಟ್ರಪತಿಯವರನ್ನು ಆತ್ಮೀಯವಾಗಿ ಬೀಳ್ಕೊಟ್ಟರು.
ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಪೊಲೀಸ್ ಮಹಾನಿರ್ದೇಶಕ ಹಾಗೂ ಮಹಾ ನಿರೀಕ್ಷಕ ಪ್ರವೀಣ್ ಸೂದ್ ಸೇರಿದಂತೆ ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳು ಹಾಜರಿದ್ದರು.