ಬೆಂಗಳೂರು: ಕೋವಿಡ್ ಲಾಕ್ಡೌನ್ ನಂತರ ಮೊದಲ ಬಾರಿಗೆ ಪ್ರಾಥಮಿಕ ಶಾಲೆಗಳು ಇಂದಿನಿಂದ ಪುನಾರಂಭಗೊಳ್ಳುತ್ತಿವೆ. 6 ನೇ ತರಗತಿಯಿಂದ 8 ನೇ ತರಗತಿವರೆಗಿನ ಎರಡನೇ ಹಂತದಲ್ಲಿ ಶಾಲೆಗಳಿಗೆ ಆಗಮಿಸುತ್ತಿರುವ ವಿದ್ಯಾರ್ಥಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಭ ಕೋರುವುದರೊಂದಿಗೆ ಎಚ್ಚರ ತಪ್ಪದಂತೆ ಸಲಹೆಯನ್ನೂ ಸಹ ನೀಡಿದ್ದಾರೆ.
ರಾಜ್ಯಾದ್ಯಂತ ಇಂದಿನಿಂದ 6 ರಿಂದ 8 ನೇ ತರಗತಿ ವಿದ್ಯಾರ್ಥಿಗಳಿಗೆ ಭೌತಿಕ ತರಗತಿಗಳು ಪುನಾರಂಭವಾಗಿದ್ದು, ಸರ್ಕಾರ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡಿದೆ. ಮಕ್ಕಳು, ಶಿಕ್ಷಕರು ಹಾಗೂ ಪೋಷಕರು, ಸುರಕ್ಷತಾ ಮಾರ್ಗಸೂಚಿಗಳನ್ನು ಪಾಲಿಸಿ, ಆತಂಕ ಪಡದೆ ಸರ್ಕಾರದೊಂದಿಗೆ ಸಹಕರಿಸಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.