ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್ ಗೆಲುವಿಗಾಗಿ ಜಿಲ್ಲಾ ಪಂಚಾಯಿತಿ ಮಟ್ಟದಲ್ಲಿ ಪ್ರಚಾರ ಮಾಡುವ ಮಟ್ಟಕ್ಕಿಳಿದಿದ್ದರು ಎಂದು ಕೇಂದ್ರದ ಮಾಜಿ ಸಚಿವ ಕೆ ಎಚ್ ಮುನಿಯಪ್ಪ ಲೇವಡಿ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಗುಜರಾತ್ ಗೆಲುವಿಗಾಗಿ ಕಾಂಗ್ರೆಸ್ ಪ್ರಾಮಾಣಿಕ ಪ್ರಯತ್ನ ನಡೆಸಿತು. ಪಕ್ಷ ಎಲ್ಲ ಕೆಲಸವನ್ನೂ ಒಗ್ಗಟ್ಟಾಗಿ ಮಾಡಿತ್ತು. ಆದರೆ ಬಿಜೆಪಿಯವರು ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿದ್ದಾರೆ. ಪ್ರಧಾನಿ ಮೋದಿ ಇಷ್ಟೊಂದು ದೊಡ್ಡ ದೇಶವನ್ನು ಬಿಟ್ಟು ಜಿಲ್ಲಾ ಮಟ್ಟದಲ್ಲಿ ಪ್ರಚಾರ ಮಾಡಿದರು ಎಂದರು.