ಕರ್ನಾಟಕ

karnataka

ETV Bharat / state

ಡಾ. ಸಿದ್ದಲಿಂಗಯ್ಯ ನಿಧನಕ್ಕೆ ಪ್ರಧಾನಿ ಮೋದಿ, ಮಾಜಿ ಪ್ರಧಾನಿ ಹೆಚ್​ಡಿಡಿ ಸಂತಾಪ

ಡಾ. ಸಿದ್ದಲಿಂಗಯ್ಯನವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಮಾಜಿ ಪ್ರಧಾನಿ ಹೆಚ್​.ಡಿ.ದೇವೇಗೌಡ, ವಿಧಾನಸಭಾ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಸಂತಾಪ ಸೂಚಿಸಿದ್ದಾರೆ.

ಪ್ರಧಾನಿ ಮೋದಿ, ಮಾಜಿ ಪ್ರಧಾನಿ ಹೆಚ್​ಡಿಡಿ ಸಂತಾಪ
ಪ್ರಧಾನಿ ಮೋದಿ, ಮಾಜಿ ಪ್ರಧಾನಿ ಹೆಚ್​ಡಿಡಿ ಸಂತಾಪ

By

Published : Jun 11, 2021, 8:46 PM IST

Updated : Jun 11, 2021, 9:02 PM IST

ಕನ್ನಡದ ಬಂಡಾಯ ಸಾಹಿತಿ ಎಂದೇ ಖ್ಯಾತಿಯಾಗಿರುವ ಡಾ. ಸಿದ್ದಲಿಂಗಯ್ಯನವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಸಿದ್ದಲಿಂಗಯ್ಯನವರ ಬರಹಗಳು, ಕವನಗಳು ಮತ್ತು ಅವರು ಸಮಾಜಕ್ಕೆ ನೀಡಿರುವ ಕೊಡುಗೆಗಳು ಅನನ್ಯ. ಅವರ ನಿಧನದಿಂದ ತೀವ್ರ ದುಃಖ ಉಂಟಾಯಿತು. ಅವರ ಕುಟುಂಬ ಮತ್ತು ಅಭಿಮಾನಿಗಳ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ ಓಂ ಶಾಂತಿ ಎಂದು ಟ್ವೀಟ್ ಮಾಡಿದ್ದಾರೆ.

‘ಅಭಿಮಾನಿಗಳಿಗೆ ನೋವು ಭರಿಸುವ ಶಕ್ತಿ ನೀಡಲಿ’

ಹಿರಿಯ ಕವಿ ಡಾ. ಸಿದ್ದಲಿಂಗಯ್ಯ ಅವರ ನಿಧನದ ಸುದ್ದಿ ತಿಳಿದು ತೀವ್ರ ಬೇಸರವಾಗಿದೆ ಎಂದು ಮಾಜಿ ಪ್ರಧಾನಿ ಹೆಚ್​.ಡಿ.ದೇವೇಗೌಡ ಕಂಬನಿ ಮಿಡಿದಿದ್ದಾರೆ. ದಲಿತರನ್ನು ಜಾಗೃತಗೊಳಿಸುವಲ್ಲಿ ಡಾ. ಸಿದ್ದಲಿಂಗಯ್ಯ ಕೊಡುಗೆ ಅಪಾರ. ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ, ಅವರ ಕುಟುಂಬದವರು ಹಾಗೂ ನಾಡಿನಲ್ಲಿರುವ ಅಭಿಮಾನಿಗಳಿಗೆ ಈ ನೋವು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

‘ಸಾಹಿತ್ಯದ ಕೊಂಡಿ ಕಳಚಿದೆ’

ವಿಧಾನ ಪರಿಷತ್ತಿನ ಮಾಜಿ ಸದಸ್ಯರೂ, ಕನ್ನಡ ಅಭಿವದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಕವಿ, ಸಾಹಿತಿ, ಚಿಂತಕರು ಅಲ್ಲದೆ ಉತ್ತಮ‌ ಭಾಷಣಕಾರರೂ ಆಗಿದ್ದ ನಾಡೋಜ ಡಾ.ಸಿದ್ದಲಿಂಗಯ್ಯ ಅವರ ನಿಧನಕ್ಕೆ ವಿಧಾನಸಭಾ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಸಂತಾಪ ಸೂಚಿಸಿದ್ದಾರೆ. ‘ಸಿದ್ದಲಿಂಗಯ್ಯನವರು ಕನ್ನಡ ಸಾಹಿತ್ಯ ಲೋಕಕ್ಕೆ ತಮ್ಮದೇ ಆದ ರೀತಿಯಲ್ಲಿ ಕೊಡುಗೆ ನೀಡಿ ಛಾಪನ್ನು ಮೂಡಿಸಿದ್ದರು. ಅವರ ನಿಧನದಿಂದ ಕನ್ನಡ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟವುಂಟಾಗಿದೆ ಹಾಗೂ ಸಾಹಿತ್ಯ ಲೋಕದ ಕೊಂಡಿಯೊಂದು ಕಳಚಿದಂತಾಗಿದೆ’ ಎಂದು ಹೇಳಿದ್ದಾರೆ.

ಇದನ್ನೂ ಓದಿ:ಬಂಡಾಯ ಸಾಹಿತಿ, ಕವಿ ಡಾ.ಸಿದ್ದಲಿಂಗಯ್ಯ ವಿಧಿವಶ

Last Updated : Jun 11, 2021, 9:02 PM IST

ABOUT THE AUTHOR

...view details