ಕರ್ನಾಟಕ

karnataka

ETV Bharat / state

ನಗರದ ಎರಡು ಕಡೆ ಮೋದಿ ರೋಡ್ ಶೋ: ಸಕಲ ಸಿದ್ಧತೆಗೆ ಸಿಎಂ ಬೊಮ್ಮಾಯಿ ಸೂಚನೆ

ಪ್ರಧಾನಿ ನರೇಂದ್ರ ಮೋದಿಯವರು ಬೆಂಗಳೂರಿಗೆ ಆಗಮಿಸುತ್ತಿದ್ದು,ಅಭೂತಪೂರ್ವ ಸ್ವಾಗತ ಕೋರಲು ನಿರ್ಧರಿಸಲಾಗಿದೆ.

prime-minister-modi-road-show-in-banglore
ನಗರದ ಎರಡು ಕಡೆ ಮೋದಿ ರೋಡ್ ಶೋ : ಸಕಲ ಸಿದ್ಧತೆಗೆ ಸಿಎಂ ಸೂಚನೆ

By

Published : Jun 15, 2022, 6:29 PM IST

ಬೆಂಗಳೂರು: ಬಿಜೆಪಿ ಅಧಿಕಾರದಲ್ಲಿ ಇರದ ರಾಜ್ಯಗಳಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದಾಗ ಅಭೂತಪೂರ್ವ ಸ್ವಾಗತ ಸಿಕ್ಕಿದೆ. ಅದಕ್ಕಿಂತ ಕಡಿಮೆಯಾಗದಂತೆ ನಾವು ಸ್ವಾಗತ ಮಾಡಬೇಕು, ಇದು ಚುನಾವಣಾ ವರ್ಷವಾಗಿರುವ ಹಿನ್ನೆಲೆಯಲ್ಲಿ ಅವರ ಭೇಟಿಯ ಸದುಪಯೋಗಪಡಿಸಿಕೊಳ್ಳಬೇಕು ಎಂದು ಪಕ್ಷದ ನಾಯಕರು ಮತ್ತು ಕಾರ್ಯಕರ್ತರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರೆ ನೀಡಿದ್ದಾರೆ.

ನಗರದ ಅರಮನೆ ಮೈದಾನದಲ್ಲಿ ನಡೆದ ಪ್ರಧಾನಿ ಕಾರ್ಯಕ್ರಮದ ಪೂರ್ವ ಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, ಪ್ರಧಾನಿಗಳು ಬಹಳ ದಿನಗಳ ನಂತರ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಅವರು ಬೇರೆ ರಾಜ್ಯಗಳಿಗೆ ಹೋದಾಗ ಭಾರಿ ಬೆಂಬಲ ಸಿಕ್ಕಿದೆ. ಪಂಚರಾಜ್ಯಗಳ ಚುನಾವಣಾ ಫಲಿತಾಂಶ ನಂತರ ಈ ಪ್ರವಾಸ ಕೈಗೊಂಡಿದ್ದಾರೆ. ಮೊನ್ನೆ ತಮಿಳುನಾಡಿಗೆ ಹೋಗಿದ್ದಾಗ ಎಷ್ಟೊಂದು ಜನರ ಬೆಂಬಲ ಸಿಕ್ಕಿತ್ತು ಎಂಬುದನ್ನು ನೋಡಿದ್ದೇವೆ. ಅದೇ ರೀತಿ ನಮ್ಮ ರಾಜ್ಯದಲ್ಲಿಯೂ ಬೆಂಬಲ ಸಿಗುವಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.

ಇದು ಮುಂದಿನ ಲೋಕಸಭಾ ಚುನಾವಣೆಯ ದಿಕ್ಸೂಚಿ. ನಮ್ಮ ರಾಜ್ಯದಲ್ಲಿ ಮುಂದೆ ಚುನಾವಣೆ ಬರುತ್ತಿದೆ. ಈ ವರ್ಷ ಚುನಾವಣಾ ವರ್ಷ ಕೂಡ, ಅವರ ಈ ಕಾರ್ಯಕ್ರಮವನ್ನು ನಾವು ಸದುಪಯೋಗ ಪಡಿಸಿಕೊಳ್ಳಬೇಕು. ಯಲಹಂಕದಿಂದ ಪಿಎಂ ಬರುವಾಗ ಅಲ್ಲಿ ದೊಡ್ಡ ಸಂಖ್ಯೆಯಲ್ಲಿ ಕಾರ್ಯಕರ್ತರನ್ನು ಸೇರಿಸಬೇಕು. ಸಾರ್ವಜನಿಕ ಸಭೆಗೆ 50 ರಿಂದ 60 ಸಾವಿರ ಜನರ ಸೇರಿಸುವ ಗುರಿ ಹೊಂದಿದ್ದು, ಅಲ್ಲಿ ಜನರಿಗೆ ಸರ್ಕಾರದಿಂದ ಅಗತ್ಯ ವ್ಯವಸ್ಥೆ ಮಾಡಲಾಗುತ್ತದೆ. ಆದರೆ ಜನರನ್ನು ಕರೆಸುವುದು ನಿಮ್ಮ ಜವಾಬ್ದಾರಿ. ಹೀಗಾಗಿ ಜನರನ್ನು ಸೇರಿಸಿ ಕಾರ್ಯಕ್ರಮ ಯಶಸ್ವಿ ಮಾಡಬೇಕು ಎಂದು ಸೂಚಿಸಿದರು.

ಬೆಂಗಳೂರು ಉತ್ತರ ಹಾಗೂ ದಕ್ಷಿಣದಲ್ಲಿ ರೋಡ್ ಶೋ ನಡೆಯಲಿದೆ. ಯಲಹಂಕ, ಹೆಬ್ಬಾಳ, ಬ್ಯಾಟರಾಯನಪುರ, ಮಲ್ಲೇಶ್ವರಂನಲ್ಲಿ ಒಂದು ರೋಡ್ ಶೋ, ಚಾಮರಾಜಪೇಟೆ, ಚಿಕ್ಕಪೇಟೆ, ಜಯನಗರ ಸೇರಿದಂತೆ ಮತ್ತೊಂದು ಕಡೆ ರೋಡ್ ಶೋ ನಡೆಯಲಿದೆ. ಒಟ್ಟು 12 ಕಿಲೋ ಮೀಟರ್ ರೋಡ್ ಶೋಗೆ ಸಿದ್ದತೆ ಮಾಡಿಕೊಳ್ಳಬೇಕು, 18ನೇ ತಾರೀಕಿನ ಒಳಗೆ ಎಲ್ಲ ರೀತಿಯ ಸಿದ್ಧತೆ ಆಗಬೇಕು. ಪ್ರಧಾನಿಗಳ ಕಾರ್ಯಕ್ರಮ ಗಂಭೀರವಾಗಿ ತೆಗೆದುಕೊಂಡು, ಶ್ರಮ ವಹಿಸಿ ಜನರ ಸೇರಿಸಬೇಕು ಎಂದು ಬೆಂಗಳೂರು ಪಕ್ಷದ ನಾಯಕರಿಗೆ ಸಿಎಂ ಬೊಮ್ಮಾಯಿ ಕರೆ ನೀಡಿದರು.

ಕೊಮ್ಮಘಟ್ಟದಲ್ಲಿ ಬೃಹತ್ ಸಮಾವೇಶ ಸಮಾವೇಶ ಯಶಸ್ವಿಗೊಳಿಸಲು‌ ಸಚಿವರು, ಶಾಸಕರು, ಮಾಜಿ ಕಾರ್ಪೊರೇಟರ್‌ಗಳಿಗೆ ಸಿಎಂ ಮತ್ತು ರಾಜ್ಯಾಧ್ಯಕ್ಷ ಕಟೀಲ್ ಜವಾಬ್ದಾರಿ ಹಂಚಿಕೆ ಮಾಡಿದರು‌. ಕೊಮ್ಮಘಟ್ಟದಲ್ಲಿ ಬೃಹತ್ ಜನ ಸಮಾವೇಶಕ್ಕೆ 50-60 ಸಾವಿರ ಜನರನ್ನು ಸೇರಿಸಲು ಬಿಜೆಪಿ ಯೋಜನೆ ರೂಪಿಸಿದೆ. ಕಾರ್ಯಕ್ರಮ ಸ್ಥಳದಲ್ಲಿ 30 ಸಾವಿರ ಆಸನಗಳು ವ್ಯವಸ್ಥೆ, ಜನರನ್ನು ಕರೆತರಲು 656 ಬಸ್ ಗಳ ವ್ಯವಸ್ಥೆ ಮಾಡಲು ನಿರ್ಧರಿಸಲಾಗಿದೆ. ಈ ಕಾರ್ಯಕ್ರಮಕ್ಕೆ ಬಿಡಿಎಯಿಂದ 9 ಕೋಟಿ ಹಣದ ನೆರವು ಕಲ್ಪಿಸಲಾಗುತ್ತಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ:ಪ್ರಧಾನಿ ಮೋದಿ ಮೈಸೂರು ಭೇಟಿ ಕಾರ್ಯಕ್ರಮದಲ್ಲಿ ಕನ್ನಡ ಕಡೆಗಣನೆ: ನಿಖಿಲ್ ಕುಮಾರಸ್ವಾಮಿ

ABOUT THE AUTHOR

...view details