ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು 89ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಶುಭಕೋರಿ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, 'ನಮ್ಮ ಮಾಜಿ ಪ್ರಧಾನಿ ಮತ್ತು ಗೌರವಾನ್ವಿತ ಮುತ್ಸದ್ಧಿ ಶ್ರೀ ಹೆಚ್.ಡಿ.ದೇವೇಗೌಡ ಜೀ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ನಿಮಗೆ ದೇವರು ಸುದೀರ್ಘ ಮತ್ತು ಉತ್ತಮ ಆರೋಗ್ಯ ನೀಡಲಿ' ಎಂದು ಆಶಿಸಿದ್ದಾರೆ.
89ನೇ ವಸಂತಕ್ಕೆ ಕಾಲಿಟ್ಟ ದೇವೇಗೌಡರು; ಜನ್ಮದಿನಕ್ಕೆ ಶುಭಕೋರಿದ ಪ್ರಧಾನಿ ಮೋದಿ - ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಪ್ರಧಾನಿ ನರೇಂದ್ರ ಮೋದಿ
ಮಾಜಿ ಪ್ರಧಾನಿ ಮತ್ತು ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು 89ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಜನ್ಮದಿನಕ್ಕೆ ಪ್ರಧಾನಿ ಮೋದಿ ಶುಭ ಕೋರಿದ್ದಾರೆ.
ಜನ್ಮದಿನಕ್ಕೆ ಶುಭಕೋರಿದ ಪ್ರಧಾನಿ ಮೋದಿ
ಇದನ್ನೂ ಓದಿ:ಪ್ರಾದೇಶಿಕ ಪಕ್ಷಗಳಿಂದಲೇ ನಾಡಿನ ಅಭಿವೃದ್ಧಿ ಸಾಧ್ಯ: ಹೆಚ್.ಡಿ ದೇವೇಗೌಡ
ಕಳೆದ ವರ್ಷ ಕೋವಿಡ್-19 ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿದ್ದ ಕಾರಣ ಜನ್ಮದಿನದ ಸಂಭ್ರಮಾಚರಣೆ ಮಾಡಬಾರದು ಎಂದು ದೇವೇಗೌಡರು ತಮ್ಮ ಅಭಿಮಾನಿಗಳು ಹಾಗೂ ಕಾರ್ಯಕರ್ತರಲ್ಲಿ ಮನವಿ ಮಾಡಿದ್ದರು.
Last Updated : May 18, 2022, 10:27 AM IST