ಬೆಂಗಳೂರು:ಇಂದು ಬೆಳಗ್ಗೆ 11.30ಕ್ಕೆ ರಾಷ್ಟ್ರ ಮಟ್ಟದಲ್ಲಿ ಬಿಜೆಪಿ ಸಂಘಟನೆ ಕುರಿತು ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಸಂವಾದ ಕಾರ್ಯಕ್ರಮವಿದ್ದು, ಎಲ್ಲ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು, ಪಕ್ಷದ ರಾಜ್ಯಾಧ್ಯಕ್ಷರು ಪಾಲ್ಗೊಳ್ಳಲಿದ್ದಾರೆ.
ರಾಜ್ಯದಿಂದ ಅರುಣ್ ಸಿಂಗ್, ಸಿ.ಟಿ.ರವಿ ಹಾಗೂ ನಳಿನ್ ಕುಮಾರ್ ಕಟೀಲ್ ಪಾಲ್ಗೊಳ್ಳಲಿದ್ದಾರೆ. ಮೂರು ದಿನಗಳ ರಾಜ್ಯ ಪ್ರವಾಸದಲ್ಲಿರುವ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಕಳೆದ ಎರಡು ದಿನಗಳಿಂದ ಸಚಿವರ ಸಭೆ, ಶಾಸಕರ ಒನ್ ಟು ಒನ್ ಮೀಟಿಂಗ್ ಮಾಡಿದ್ದು, ಇಂದು ರಾಜ್ಯ ಪದಾಧಿಕಾರಿಗಳ ಸಭೆಗೆ ಮುಂದಾಗಿದ್ದಾರೆ. ಸಂಘಟನೆ ಕುರಿತು ಮಹತ್ವದ ಮಾತುಕತೆ ನಡೆಸಲಿದ್ದಾರೆ. ಮೋದಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ರಾಜ್ಯ ಪದಾಧಿಕಾರಿಗಳ ಸಭೆ ಸ್ವಲ್ಪ ವಿಳಂಬವಾಗಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಸಂವಾದ ಮುಗಿಯುತ್ತಿದ್ದಂತೆ ಪದಾಧಿಕಾರಿಗಳ ಸಭೆ ನಡೆಯಲಿದೆ.