ಬೆಂಗಳೂರು:ರಾಜವಂಶರ ಪೈಕಿ ಹೊಯ್ಸಳ ರಾಜವಂಶ ಕೂಡ ಒಂದಾಗಿದ್ದು, ಅವರ ಸ್ಮಾರಕಗಳಿಗೆ ವಿಶ್ವ ಪರಂಪರೆಯ ಸ್ಥಾನಮಾನ ನೀಡುವಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯಸ್ಥಿಕೆ ವಹಿಸಬೇಕು ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಮನವಿ ಮಾಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರಿಗೆ ಈ ಸಂಬಂಧ ಪತ್ರ ಬರೆದಿರುವ ದೇವೇಗೌಡರು, ಹೊಯ್ಸಳ 12 ಮತ್ತು 13ನೇ ಶತಮಾನದಲ್ಲಿ ಕರ್ನಾಟಕವನ್ನು ಆಳಿದ ಪ್ರಮುಖ ರಾಜವಂಶವಾಗಿದೆ. ಕಲೆ, ಸಾಹಿತ್ಯ ಪ್ರಮುಖವಾಗಿ ದೇವಾಲಯದ ವಾಸ್ತುಶಿಲ್ಪದ ಮೇಲೆ ಪ್ರಭಾವ ಬೀರಿದೆ. ಹೊಯ್ಸಳರ ಸ್ಮಾರಕಗಳಿಗೆ ವಿಶ್ವಪರಂಪರೆಯ ಪಟ್ಟಿಯಲ್ಲಿ ಸ್ಥಾನಮಾನ ನೀಡುವ ಸಂಬಂಧ ಭಾರತೀಯ ಪುರಾತತ್ವ ಇಲಾಖೆಯಿಂದ ಯುನೆಸ್ಕೋಗೆ ನಾಮನಿರ್ದೇಶನ ಮಾಡಲಾಗಿದೆ. ಮತ್ತಷ್ಟು ಅಗತ್ಯ ದಾಖಲೆಗಳನ್ನು ಸಲ್ಲಿಕೆ ಮಾಡುವಂತೆ ಸಂಬಂಧಪಟ್ಟವರಿಗೆ ಸೂಚನೆ ನೀಡಬೇಕು. ಪ್ರಧಾನಿಗಳು ಮಧ್ಯಸ್ಥಿಕೆ ವಹಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.
ಇದನ್ನೂ ಓದಿ:ವಿವಿಧ ಯೋಜನೆಗಳಿಗೆ ಅರಣ್ಯ ಇಲಾಖೆ ಅನುಮೋದನೆ ಪಡೆಯಲು ಉನ್ನತ ಮಟ್ಟದ ಸಮಿತಿ ರಚನೆಗೆ ತೀರ್ಮಾನ..