ಕರ್ನಾಟಕ

karnataka

ಖಾಸಗಿ ಆಸ್ಪತ್ರೆಗಳು ಚಿಕಿತ್ಸೆ ನೀಡಲು ನಿರ್ಲಕ್ಷಿಸಿದರೆ ಕಠಿಣ ಕ್ರಮ: ಸಚಿವ ಶ್ರೀರಾಮುಲು ಎಚ್ಚರಿಕೆ

By

Published : Jul 28, 2020, 7:18 PM IST

ನಟಿ ಸುಧಾರಾಣಿ ಅವರ ಸಂಬಂಧಿಕರಿಗೆ ಖಾಸಗಿ ಆಸ್ಪತ್ರೆಯಲ್ಕಿ ಚಿಕಿತ್ಸೆ ನಿರಾಕರಣೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಚಿವ ಶ್ರೀರಾಮುಲು, ಖಾಸಗಿ ಆಸ್ಪತ್ರೆಗಳ ಇಂಥ ವರ್ತನೆಯನ್ನು ಸರ್ಕಾರ ಸಹಿಸಲ್ಲ. ಯಾರಿಗೂ ಚಿಕಿತ್ಸೆ ನೀಡದೆ ವಾಪಸ್ ಕಳುಹಿಸುವಂತಿಲ್ಲ. ಈ ರೀತಿ ವರ್ತಿಸಿದರೆ ಆಸ್ಪತ್ರೆಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ರು.

ಆರೋಗ್ಯ ಸಚಿವ ಶ್ರೀರಾಮುಲು ಎಚ್ಚರಿಕೆ
ಆರೋಗ್ಯ ಸಚಿವ ಶ್ರೀರಾಮುಲು ಎಚ್ಚರಿಕೆ

ಬೆಂಗಳೂರು:ಖಾಸಗಿ ಆಸ್ಪತ್ರೆಗಳು ಚಿಕಿತ್ಸೆ ನೀಡಲು ನಿರ್ಲಕ್ಷಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ಶ್ರೀರಾಮುಲು ಎಚ್ಚರಿಕೆ ನೀಡಿದ್ದಾರೆ.

ವಿಕಾಸಸೌಧದಲ್ಲಿ ಇಂದು ಡಿಸಿಎಂ ಅಶ್ವತ್ಥನಾರಾಯಣ ಅವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಟಿ ಸುಧಾರಾಣಿ ಅವರ ಸಂಬಂಧಿಕರಿಗೆ ಖಾಸಗಿ ಆಸ್ಪತ್ರೆಯಲ್ಕಿ ಚಿಕಿತ್ಸೆ ನಿರಾಕರಣೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದರು. ಖಾಸಗಿ ಆಸ್ಪತ್ರೆಗಳ ಇಂಥ ವರ್ತನೆಯನ್ನು ಸರ್ಕಾರ ಸಹಿಸಲ್ಲ. ಯಾರಿಗೂ ಚಿಕಿತ್ಸೆ ನೀಡದೆ ವಾಪಸ್ ಕಳುಹಿಸುವಂತಿಲ್ಲ. ಈ ರೀತಿ ವರ್ತಿಸಿದರೆ ಆಸ್ಪತ್ರೆಗಳ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದು ಮತ್ತೊಮ್ಮೆ ಎಚ್ಚರಿಕೆ ನೀಡಿದರು.

ಖಾಸಗಿ ಆಸ್ಪತ್ರೆಗಳಿಗೆ ಎಚ್ಚರಿಕೆ ನೀಡಿದ ಸಚಿವ ಶ್ರೀರಾಮುಲು

ಡಿಸಿಎಂ ಭೇಟಿ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಕೋವಿಡ್​ಗೆ ಸಂಬಂಧಿಸಿದಂತೆ ಬೆಂಗಳೂರಿನ 8 ವಲಯಗಳ ಮಾಹಿತಿ ಬೇಕಿತ್ತು. ಅದಕ್ಕಾಗಿ ಡಿಸಿಎಂ ಡಾ. ಅಶ್ವತ್ಥನಾರಾಯಣ ಅವರನ್ನು ಭೇಟಿ ಮಾಡಿ ಮಾಹಿತಿ ಪಡೆದಿದ್ದೇನೆ‌. ಕೆಲವು ಖಾಸಗಿ ಆಸ್ಪತ್ರೆಗಳಲ್ಲಿ ಸರ್ಕಾರ ದರ ನಿಗದಿ ಮಾಡಿರುವುದಕ್ಕಿಂತ ಹೆಚ್ಚಿನ ಹಣ ಪಡೆಯುತ್ತಿದ್ದಾರೆ. ಈ ಕುರಿತು ಮಾಹಿತಿ ಪಡೆದಿದ್ದೇನೆ ಎಂದರು.

ಆಗಸ್ಟ್​​ನಲ್ಲಿ ಸಚಿವ ಸಂಪುಟ ವಿಸ್ತರಣೆ ಮಾಡುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಶ್ರೀರಾಮುಲು, ಈ ಕುರಿತು ನಮ್ಮ ರಾಷ್ಟ್ರೀಯ ನಾಯಕರು, ಪಕ್ಷದ ರಾಜ್ಯಾಧ್ಯಕ್ಷರು ಹಾಗೂ ಸಿಎಂ ಬಿ.ಎಸ್. ಯಡಿಯೂರಪ್ಪ ನಿರ್ಧರಿಸುತ್ತಾರೆ. ಅಂತಿಮ ತೀರ್ಮಾನವನ್ನು ಅವರೇ ಮಾಡುತ್ತಾರೆ. ಇಲ್ಲಿಯವರೆಗೂ ಅವರ ನಿರ್ಧಾರಗಳಂತೆ ನಡೆದಿದೆ. ಬೇರೆ ಬೆಳವಣಿಗೆಗಳ ಬಗ್ಗೆ ನನಗೆ ಮಾಹಿತಿಯಿಲ್ಲ ಎಂದು ಸ್ಪಷ್ಟಪಡಿಸಿದರು.

ABOUT THE AUTHOR

...view details