ಕರ್ನಾಟಕ

karnataka

By

Published : May 13, 2020, 8:24 PM IST

ETV Bharat / state

ಕೊರೊನಾ ಪೀಡಿತರಲ್ಲದ ರೋಗಿಗಳಿಗೆ ಖಾಸಗಿ ಆಸ್ಪತ್ರೆಗಳು ಚಿಕಿತ್ಸೆ ನಿರಾಕರಿಸಬಾರದು: ಶ್ರೀರಾಮುಲು

ರಾಜ್ಯದ 43 ಖಾಸಗಿ ಆಸ್ಪತ್ರೆಗಳ ಆಡಳಿತ ಮಂಡಳಿಗಳ ಜಪತೆ ಆರೋಗ್ಯ ಸಚಿವ ಶ್ರೀರಾಮುಲು ವಿಡಿಯೋ ಕಾನ್ಫರೆನ್ಸ್​ ಮೂಲಕ ಸಮಾಲೋಚನೆ ನಡೆಸಿದ್ದಾರೆ. ಈ ವೇಳೆ ಎಲ್ಲಾ ಖಾಸಗಿ ಆಸ್ಪತ್ರೆಗಳು ಒಂದು ಪ್ರತ್ಯೇಕ ವಾರ್ಡ್​ಅನ್ನು ಕೋವಿಡ್ ರೋಗಿಗಳಿಗೆ ಮೀಸಲಿಡಲು ಸೂಚನೆ ನೀಡಿದರು.

Private hospitals should not refuse treatment for non-corona-affected patients: Sriramulu
ಕೊರೊನಾ ಪೀಡಿತರಲ್ಲದ ರೋಗಿಗಳಿಗೆ ಖಾಸಗಿ ಆಸ್ಪತ್ರೆಗಳು ಚಿಕಿತ್ಸೆ ನಿರಾಕರಿಸಬಾರದು: ಶ್ರೀರಾಮುಲು

ಬೆಂಗಳೂರು: ಕೊರೊನಾ ಪೀಡಿತರಲ್ಲದ ರೋಗಿಗಳಿಗೆ ಯಾವುದೇ ಕಾರಣಕ್ಕೂ ಚಿಕಿತ್ಸೆ ನಿರಾಕರಿಸಬಾರದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶ್ರೀರಾಮುಲು ಖಾಸಗಿ ಆಸ್ಪತ್ರೆಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ವಿಧಾನಸೌಧದಲ್ಲಿ ರಾಜ್ಯದ 43 ಖಾಸಗಿ ಆಸ್ಪತ್ರೆಗಳ ಆಡಳಿತ ಮಂಡಳಿಗಳ ಜೊತೆ ವಿಡಿಯೋ ಸಂವಾದ ನಡೆಸಿದ ಸಂದರ್ಭ ಮಾತನಾಡಿದ ಅವರು, ಖಾಸಗಿ ಆಸ್ಪತ್ರೆಗೆ ಕೊರೊನಾ ರೋಗಿ ಬಂದರೆ ಪ್ರತ್ಯೇಕ ವಾರ್ಡ್​ನಲ್ಲಿಟ್ಟು ಚಿಕಿತ್ಸೆ ಕೊಡಬೇಕು. ಆ ನಂತರ ರೋಗಿಯನ್ನು ಸರ್ಕಾರಿ ಆಸ್ಪತ್ರೆಗೆ ಕಳುಹಿಸಬೇಕು.

ಎಲ್ಲಾ ಖಾಸಗಿ ಆಸ್ಪತ್ರೆಗಳು ಒಂದು ಪ್ರತ್ಯೇಕ ವಾರ್ಡ್​ಅನ್ನು ಕೋವಿಡ್ ರೋಗಿಗಳಿಗೆ ಮೀಸಲಿಡಲು ಸೂಚನೆ ನೀಡಿದರು. ನಾಳೆಯಿಂದ ಎಲ್ಲಾ ಖಾಸಗಿ ಆಸ್ಪತ್ರೆಗಳನ್ನು ಪ್ರಾರಂಭಿಸಲು ಒಪ್ಪಿಗೆ ನೀಡಿದ್ದೇನೆ.

ಕೋವಿಡ್ ಪಾಸಿಟಿವ್ ವ್ಯಕ್ತಿಗಳು ಆಸ್ಪತ್ರೆಗೆ ಬಂದು ಹೋದರೆ ಆಸ್ಪತ್ರೆ ಸೀಲ್ಡ್ ಆಗುವ ಆತಂಕ ನಿವಾರಣೆ ಆಗಿದೆ. ಆಸ್ಪತ್ರೆಗಳನ್ನು ಸೀಲ್ ​ಡೌನ್​ ಮಾಡದೆ ಸ್ಯಾನಿಟೈಸ್ ಮಾಡಲಾಗುತ್ತದೆ. ಕೊರೊನಾ ಪಾಸಿಟಿವ್ ವ್ಯಕ್ತಿಗೆ ಚಿಕಿತ್ಸೆ ನೀಡಿದ ಖಾಸಗಿ ವೈದ್ಯರಿಗೆ ಹೋಂ ಕೊರಂಟೈನ್ ಮಾಡಲಾಗುತ್ತದೆ ಎಂದರು.

ವೈದ್ಯರನ್ನು ಸರ್ಕಾರಿ ಕ್ವಾರಂಟೈನ್​ನಲ್ಲಿ ಇಡುವುದಿಲ್ಲ. ಗರ್ಭಿಣಿಯರು ಕಂಟೇನ್ಮೆಂಟ್ ಝೋನ್​​ನಿಂದ ಬಂದರೆ ಮಾತ್ರ ಪರೀಕ್ಷಿಸಬೇಕು. ಇಲ್ಲದಿದ್ದರೆ ಕೋವಿಡ್ ಟೆಸ್ಟ್ ಮಾಡುವ ಅವಶ್ಯಕತೆ ಇಲ್ಲ. ಖಾಸಗಿ ಆಸ್ಪತ್ರೆಗಳಿಗೆ ವಿಧಿಸಿದ್ದ ಕೆಲವು ನಿರ್ಬಂಧ ತೆರವಿಗೆ ನಿರ್ಧಾರ ಮಾಡಲಾಗಿದೆ ಎಂದರು.

ಕೋವಿಡ್ ಮಾರಣಾಂತಿಕ ಕಾಯಿಲೆ ಅಲ್ಲ. ಅದರ ಬಗ್ಗೆ ಅನಗತ್ಯ ಭಯ ಪಡುವುದು ಬೇಡ. ಕಂಟೇನ್ಮೆಂಟ್​ ಝೋನ್ ಪ್ರವೇಶಿಸುವ ಗರ್ಭಿಣಿಯರಿಗೆ ಮಾತ್ರ ಪರೀಕ್ಷೆ ಕಡ್ಡಾಯ. ರೋಗಿಗಳಿಗೆ ತೊಂದರೆ ಕೊಡುವ ಖಾಸಗಿ ಆಸ್ಪತ್ರೆಗಳ ಮೇಲೆ ಕ್ರಿಮಿನಲ್ ಕೇಸ್ ಹಾಕಲು ತೀರ್ಮಾನ ಮಾಡಲಾಗಿದೆ. ನಾನ್ ಕೋವಿಡ್ ರೋಗಿಗಳ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗಳು ಹಿಂದೇಟು ಹಾಕಬಾರದು ಎಂದರು.

ಮುಂದಿನ ದಿನಗಳಲ್ಲಿ ಪರಿಸ್ಥಿತಿ ಕೈಮೀರಿದರೆ ಖಾಸಗಿ ಆಸ್ಪತ್ರೆ ಆಡಳಿತ ಮಂಡಳಿಗಳು ಸರ್ಕಾರದ ಜತೆ ಕೈಜೋಡಿಸಲು ಸೂಚನೆ ನೀಡಿದ್ದೇವೆ. ನಾಳೆಯಿಂದ ಬಾಗಿಲು ತೆರೆಯಲು ಎಲ್ಲಾ ಖಾಸಗಿ ಆಸ್ಪತ್ರೆ ಹಾಗೂ ಕ್ಲಿನಿಕ್​ಗಳು ಒಪ್ಪಿಗೆ ನೀಡಿವೆ ಎಂದು ವಿವರಿಸಿದರು.

ABOUT THE AUTHOR

...view details