ಕರ್ನಾಟಕ

karnataka

ETV Bharat / state

ಹೆಚ್ಚುವರಿ ಶುಲ್ಕ ಕಟ್ಟದ ಮಕ್ಕಳಿಗೆ ಪರೀಕ್ಷೆಗೆ ನಕಾರ: ಪರಮಾಧಿಕಾರ ಅಸ್ತ್ರಪ್ರಯೋಗಿಸುವುದಾಗಿ ಶಿಕ್ಷಣ ಸಚಿವ ಎಚ್ಚರಿಕೆ - ಸಚಿವ ಸುರೇಶ್​ ಕುಮಾರ್​,

ಹೆಚ್ಚುವರಿ ಶುಲ್ಕ ಪಾವತಿಸಲು ಅಸಹಾಯಕರಾದ ವಿದ್ಯಾರ್ಥಿಗಳನ್ನು ಪರೀಕ್ಷೆಯಿಂದ ಹೊರಗಿಟ್ಟದ್ದ ಪ್ರಕರಣಗಳು ದುರದೃಷ್ಟಕರವಾಗಿವೆ. ಇಂತಹ ಪ್ರಕರಣಗಳು ರಾಜ್ಯದಲ್ಲಿ ಮತ್ತೆ ಮರುಕಳಿಸದಂತೆ ಖಾಸಗಿ ಶಾಲೆಗಳು ಜಾಗೃತರಾಗಬೇಕು. ಪದೇ ಪದೇ ಈ ರೀತಿಯ ಪ್ರಕರಣಗಳು ಸಂಭವಿಸಿದರೇ ಇಲಾಖೆ ತನ್ನ ಪರಮಾಧಿಕಾರ ಚಲಾಯಿಸಬೇಕಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಎಚ್ಚರಿಕೆ ನೀಡಿದರು.

private schools additional fees, private schools additional fees issue, private schools additional fees issue news, Minister Suresh Kumar, Minister Suresh Kumar news, ಖಾಸಗಿ ಶಾಲೆಗಳ ಹೆಚ್ಚುವರಿ ಶುಲ್ಕ, ಖಾಸಗಿ ಶಾಲೆಗಳ ಹೆಚ್ಚುವರಿ ಶುಲ್ಕ ವಿಚಾರ, ಖಾಸಗಿ ಶಾಲೆಗಳ ಹೆಚ್ಚುವರಿ ಶುಲ್ಕ ವಿಚಾರ ಸುದ್ದಿ, ಸಚಿವ ಸುರೇಶ್​ ಕುಮಾರ್​, ಸಚಿವ ಸುರೇಶ್​ ಕುಮಾರ್​ ಸುದ್ದಿ,
ಸಚಿವ ಸುರೇಶ್ ಕುಮಾರ್

By

Published : Mar 19, 2021, 2:29 PM IST

ಬೆಂಗಳೂರು:ಹೆಚ್ಚುವರಿ ಶುಲ್ಕ ಪಾವತಿಸದೆ ವಿದ್ಯಾರ್ಥಿಗಳನ್ನು ಪರೀಕ್ಷೆಗೆ ನಿರಾಕರಿಸಿದ ಬೆಂಗಳೂರಿನ ರಾಯಲ್ ಕನ್ಕಾರ್ಡ್ ಶಾಲೆ ಹಾಗೂ ಶ್ರೀರಂಗಪಟ್ಟಣದ ಕೆಂಬ್ರಿಡ್ಜ್​ ಪಬ್ಲಿಕ್​ ಸ್ಕೂಲ್​ನಲ್ಲಿ ನಡೆದ ಘಟನೆ ಮತ್ತೆ ಮರುಕಳಿಸದಂತೆ ಖಾಸಗಿ ಶಾಲೆಗಳು ಕ್ರಮವಹಿಸಬೇಕು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಾಕೀತು ಮಾಡಿದ್ದಾರೆ.

ಹೆಚ್ಚುವರಿ ಶುಲ್ಕ ಪಾವತಿಸಲು ಅಸಹಾಯಕರಾದ ವಿದ್ಯಾರ್ಥಿಗಳನ್ನು ಪರೀಕ್ಷೆಯಿಂದ ಹೊರಗಿಟ್ಟದ್ದ ಪ್ರಕರಣಗಳು ದುರದೃಷ್ಟಕರವಾಗಿವೆ. ಇಂತಹ ಪ್ರಕರಣಗಳು ರಾಜ್ಯದಲ್ಲಿ ಮತ್ತೆ ಮರುಕಳಿಸದಂತೆ ಖಾಸಗಿ ಶಾಲೆಗಳು ಜಾಗೃತರಾಗಬೇಕು. ಸಾಮಾಜಿಕ ಸಂಕಷ್ಟದ ಪರಿಸ್ಥಿತಿಯಲ್ಲಿ ನಡೆಯುತ್ತಿರುವ ಇಂತಹ ಪ್ರಕರಣಗಳು ನಮ್ಮ ವಿದ್ಯಾರ್ಥಿಗಳ ಆತ್ಮವಿಶ್ವಾಸ ಕುಂದಿಸುವುದರ ಜತೆಗೆ ರಾಷ್ಟ್ರದ ಭವಿಷ್ಯದ ಹಿತದಷ್ಟಿಯಿಂದಲೂ ಒಳ್ಳೆಯ ಬೆಳವಣಿಗೆಯಲ್ಲ. ಶಾಲಾಡಳಿತ ಮಂಡಳಿ ಮತ್ತು ಪೋಷಕರ ನಡುವಿನ ಇಂತಹ ಸಂಘರ್ಷಗಳು ಮಕ್ಕಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತವೆ ಎಂದರು.

ನಮ್ಮ ಮಕ್ಕಳ ಭವಿಷ್ಯದ ಹಿತದೃಷ್ಟಿಯಿಂದ ಇಂತಹ ಪ್ರಕರಣಗಳಿಗೆ ಎಡೆಯಾಗದಂತೆ ವರ್ತಿಸಬೇಕಾದ ಅಗತ್ಯವನ್ನು ನಾನು ಪದೇ ಪದೇ ಹೇಳಿದ್ದೇನೆ. ಈ ಮೊದಲು ಬೆಂಗಳೂರಿನ ಕೋರಮಂಗಲದ ಖಾಸಗಿ ಶಾಲೆಯಲ್ಲೂ ವಿದ್ಯಾರ್ಥಿಯೊಬ್ಬನನ್ನು ಇದೇ ರೀತಿ ನಡೆಸಿಕೊಂಡಿದ್ದರಿಂದ ಆತ ಆತ್ಮಹತ್ಯೆ ಯತ್ನಕ್ಕೂ ಕೈಹಾಕಿದ್ದನ್ನು ನಾವೆಲ್ಲ ಯೋಚಿಸಬೇಕಾಗಿದೆ. ಅದೆಷ್ಟು ಆಘಾತಕಾರಿ ಎನ್ನುವುದನ್ನು ಗಮನದಲ್ಲಿ ಇರಿಸಿಕೊಳ್ಳಬೇಕಾಗಿದೆ ಎಂದು ಹೇಳಿದರು.

ಹೈಕೋರ್ಟ್​ ಕೂಡ ಇಂತಹ ಅತಿಸೂಕ್ಷ್ಮವಾದ ವಿಷಯವನ್ನು ಬಹಳ ನಾಜೂಕಿನಿಂದ ನಿರ್ವಹಿಸಬೇಕಾದ ಅಂಶ ಎಂದು ಒತ್ತಿ ಹೇಳಿರುವುದನ್ನು ನಾವೆಲ್ಲಾ ಗಮನಿಸಬೇಕಾಗಿದೆ. ನಾಡಿನ ಎಲ್ಲ ಖಾಸಗಿ ಶಾಲಾ ಆಡಳಿತ ಮಂಡಳಿಗಳು ನಮ್ಮ ಮಕ್ಕಳ ಹಿತವನ್ನು ಗಮನದಲ್ಲಿಟ್ಟುಕೊಂಡು ತೀವ್ರ ಸಂವೇದನೆಯಿಂದ ವರ್ತಿಸಬೇಕು. ಇಂತಹ ಪ್ರಕರಣಗಳು ಮರುಕಳಿಸದಂತೆ ಕೊರೊನಾ ವಿಷಮ ಕಾಲಘಟ್ಟದಲ್ಲಿ ನಮ್ಮ ಸಾಮಾಜಿಕ ಜವಾಬ್ದಾರಿ ಅರಿತು ನಡೆಯಬೇಕಿದೆ ಎಂದು ಸುರೇಶ್ ಕುಮಾರ್ ಹೇಳಿದರು.

ಪದೇ ಪದೇ ಈ ರೀತಿಯ ಪ್ರಕರಣಗಳು ಮರುಕಳಿಸಿದರೆ ಇಲಾಖೆ ತನ್ನ ಪರಮಾಧಿಕಾರ ಚಲಾಯಿಸಬೇಕಾಗುತ್ತದೆ. ಶಾಲಾಡಳಿತ ಮಂಡಳಿಗಳು ಈ ಬಗ್ಗೆ ತಿಳಿದುಕೊಳ್ಳಬೇಕಿದೆ ಎಂದು ಸಚಿವರು ಎಚ್ಚರಿಕೆ ನೀಡಿದ್ದಾರೆ.

ABOUT THE AUTHOR

...view details