ಬೆಂಗಳೂರು:ನಾಡು-ನುಡಿ ಪರಂಪರೆಗಳನ್ನು ಉಳಿಸಿ ಬೆಳೆಸುವಂತಹ ನಿಟ್ಟಿನಲ್ಲಿ ಖಾಸಗಿ ಅನುದಾನ ರಹಿತ ಶಾಲೆಗಳ ಒಕ್ಕೂಟ ( ಕ್ಯಾಮ್ಸ್) ವತಿಯಿಂದ ಇದೇ ನವೆಂಬರ್ 29 ಮತ್ತು 30ರಂದು ಖಾಸಗಿ ಶಾಲೆಗಳ 'ಕನ್ನಡ ಸಿರಿ ಸಂಭ್ರಮ' ಎಂಬ ಕಾರ್ಯಕ್ರಮವನ್ನು ಆಯೋಜಿಸುತ್ತಿದೆ.
ನ.29-30 ರಂದು ಖಾಸಗಿ ಶಾಲೆಗಳ 'ಕನ್ನಡ ಸಿರಿ ಸಂಭ್ರಮ' ವೈಭವ
ನಾಡು-ನುಡಿ ಪರಂಪರೆಗಳನ್ನು ಉಳಿಸಿ ಬೆಳೆಸುವಂತಹ ನಿಟ್ಟಿನಲ್ಲಿ ಖಾಸಗಿ ಅನುದಾನ ರಹಿತ ಶಾಲೆಗಳ ಒಕ್ಕೂಟ (ಕ್ಯಾಮ್ಸ್) ವತಿಯಿಂದ ಇದೇ ನವೆಂಬರ್ 29 ಮತ್ತು 30ರಂದು ಖಾಸಗಿ ಶಾಲೆಗಳ 'ಕನ್ನಡ ಸಿರಿ ಸಂಭ್ರಮ' ಎಂಬ ಕಾರ್ಯಕ್ರಮವನ್ನು ಆಯೋಜಿಸುತ್ತಿದೆ.
ನಗರದ ಫ್ರೀಡಂ ಪಾರ್ಕ್ನಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು, ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಉದ್ಘಾಟಿಸಲಿದ್ದಾರೆ. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ಕುಮಾರ್, ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದು ಕ್ಯಾಮ್ಸ್ ನ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ತಿಳಿಸಿದರು.
ನಾವು ಇಂಗ್ಲಿಷ್ ಮಾಧ್ಯಮ ಶಾಲೆಗಳನ್ನು ನಡೆಸುತ್ತಿದ್ದರೂ, ನಮ್ಮ ಬಹುತೇಕ ಶಾಲೆಗಳಲ್ಲಿ ಕನ್ನಡವನ್ನು ಪ್ರಥಮ ಭಾಷೆಯಾಗಿ ಬೋಧಿಸುತ್ತಿದ್ದೇವೆ. ಕನ್ನಡ ನಾಡಿನ ಸಂಸ್ಕೃತಿ, ವೈಭವ ಹಾಗೂ ಪರಂಪರೆಯನ್ನು ಬಿಂಬಿಸುವ ಸಲುವಾಗಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ಸುಮಾರು 40 ಖಾಸಗಿ ಶಾಲೆಗಳ ವಿದ್ಯಾರ್ಥಿಗಳು, ಪೋಷಕರು ಮತ್ತು ಶಿಕ್ಷಕರು ಪಾಲ್ಗೊಳ್ಳಲಿದ್ದಾರೆ. ಈಗಾಗಲೇ ರಾಜ್ಯದ ಪ್ರತಿ ಜಿಲ್ಲೆಯ ಇತಿಹಾಸವನ್ನು ಬಿಂಬಿಸುವ ಮಾದರಿಗಳನ್ನು ತಯಾರಿಸಲಾಗಿದ್ದು, ಕಾರ್ಯಕ್ರಮದಲ್ಲಿ ಪ್ರದರ್ಶಿಸಲಾಗುವುದು ಎಂದು ತಿಳಿಸಿದರು.