ಬೆಂಗಳೂರು: ಶಾಲೆಗಳು ಪ್ರಾರಂಭವಾಗುತ್ತಿದ್ದಂತೆ ರಾಜ್ಯ ಸರ್ಕಾರಕ್ಕೆ ಹೊಸ ತಲೆನೋವು ಶುರುವಾದಂತಿದೆ. ಹಲವು ಬೇಡಿಕೆಗಳ ಈಡೇರಿಕೆಗೆ ಸೆ.15ರವರೆಗೆ ಡೆಡ್‌ಲೈನ್ ನೀಡುವುದಾಗಿ ಖಾಸಗಿ ಶಾಲಾ ಒಕ್ಕೂಟ ತಿಳಿಸಿದೆ.
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸರ್ಕಾರಕ್ಕೆ ಗಡುವು ನೀಡಿದ ರುಪ್ಸಾ - bengaluru News
ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಈಗಾಗಲೇ ಕರ್ನಾಟಕ ಖಾಸಗಿ ಶಾಲೆಗಳ ಸಂಘ (ರುಪ್ಸಾ) ಸರ್ಕಾರಕ್ಕೆ ಮನವಿ ಸಲ್ಲಿಸಿದೆ. ಇದೀಗ ಸೆಪ್ಟೆಂಬರ್ 15ರವರೆಗೆ ಗಡುವು ನೀಡಿದ್ದು, ಬೇಡಿಕೆ ಈಡೇರಿಸದಿದ್ದರೆ ಹಂತ ಹಂತವಾಗಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದೆ.
ರುಪ್ಸಾ ಸಂಘದ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ
ಖಾಸಗಿ ಶಾಲಾ ಒಕ್ಕೂಟಗಳು ಇಂದು ಬೆಳಗ್ಗೆ 10 ಗಂಟೆಗೆ ಶಾಸಕರ ಭವನದಲ್ಲಿ ಮಹತ್ವದ ಸಭೆ ಕರೆದಿವೆ. ರುಪ್ಸಾ ಕರ್ನಾಟಕ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ನೇತೃತ್ವದಲ್ಲಿ ನಡೆಯುವ ಈ ಸಭೆಯಲ್ಲಿ ರುಪ್ಸಾ ಕರ್ನಾಟಕ, ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘ, ಕಲ್ಯಾಣ ಕರ್ನಾಟಕ ಖಾಸಗಿ ಶಾಲಾ ಒಕ್ಕೂಟದ ಪ್ರತಿನಿಧಿಗಳು ಭಾಗಿಯಾಗಲಿದ್ದಾರೆ. ಆ ಬಳಿಕ ಖಾಸಗಿ ಶಾಲಾ ಒಕ್ಕೂಟದ ಪ್ರತಿನಿಧಿಗಳಿಂದ ಜಂಟಿ ಸುದ್ದಿಗೋಷ್ಠಿ ನಡೆಯಲಿದೆ.
ಬೇಡಿಕೆಗಳು:
- 1995ರ ನಂತರದ ಖಾಸಗಿ ಅನುದಾನರಹಿತ ಕನ್ನಡ ಮಾಧ್ಯಮ ಶಾಲೆಗಳನ್ನು ಅನುದಾನಕ್ಕೆ ಒಳಪಡಿಸಬೇಕು.
- ನೂತನ ಪಿಂಚಣಿ ಪದ್ಧತಿಯನ್ನು ರದ್ದುಗೊಳಿಸಿ, ಹಳೆಯ ಪಿಂಚಣಿ ಪದ್ಧತಿ ಜಾರಿಗೊಳಿಸಬೇಕು.
- ಈಗಾಗಲೇ ನಿವೃತ್ತರಾದ ಹಾಗೂ ಮರಣ ಹೊಂದಿದ 2006ರ ನಂತರದ ನೌಕರರಿಗೆ ತಕ್ಷಣ ಪಿಂಚಣಿ ಕೊಡಬೇಕು.
- ಜ್ಯೋತಿ ಸಂಜೀವಿನಿ ಯೋಜನೆಯನ್ನು ಅನುದಾನಿತ/ಅನುದಾನರಹಿತ ಶಾಲಾ ಸಿಬ್ಬಂದಿಗೆ ವಿಸ್ತರಿಸಬೇಕು.
Last Updated : Aug 24, 2021, 7:29 AM IST