ಕರ್ನಾಟಕ

karnataka

ETV Bharat / state

ಬೆಂಗಳೂರು: ಡೆತ್ ನೋಟ್ ಬರೆದು ನೇಣಿಗೆ ಶರಣಾದ ಶುಶ್ರೂಷಕಿ! - Bangalore nurse suicide

ಖಾಸಗಿ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದ ಸುಮಿತ್ರಾ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

privet hospital staff nurse committed suicide at Bangalore
ಬೆಂಗಳೂರಿನಲ್ಲಿ ನರ್ಸ್ ಆತ್ಮಹತ್ಯೆ

By

Published : Jul 22, 2022, 5:42 PM IST

ಬೆಂಗಳೂರು: ಖಿನ್ನತೆಯಿಂದ ಬಳಲುತ್ತಿದ್ದ ಸ್ಟಾಫ್ ನರ್ಸ್ ನೇಣಿಗೆ ಶರಣಾಗಿರುವ ಘಟನೆ ಬೆಂಗಳೂರಿನ ಗಿರಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸುಮಿತ್ರಾ ಮೃತ ಶುಶ್ರೂಷಕಿ.

ಇವರು ಖಾಸಗಿ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು. 32 ವರ್ಷ ವಯಸ್ಸಿನ ಸುಮಿತ್ರಾ ಅವರಿಗೆ ಮದುವೆಯಾಗಿರಲಿಲ್ಲ. ಸುಮಿತ್ರಾ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಕುಟುಂಬಸ್ಥರೊಂದಿಗೆ ವಾಸವಿದ್ದ ಸುಮಿತ್ರಾ ಮುಂಜಾನೆ ಎಂದಿನಂತೆ ಎದ್ದಿರಲಿಲ್ಲ. ಕುಟುಂಬಸ್ಥರು‌ ಕೋಣೆಯ ಬಾಗಿಲು ತಟ್ಟಿದರೂ ಸಹ ಬಾಗಿಲು ತೆರೆಯಲಿಲ್ಲ. ಅನುಮಾನಗೊಂಡ ಕುಟುಂಬಸ್ಥರು ಬಾಗಿಲು ಮುರಿದು ನೋಡಿದಾಗ ಸುಮಿತ್ರಾ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ.

ಇದನ್ನೂ ಓದಿ:ಬೆಸ್ಕಾಂ ನಿರ್ಲಕ್ಷ್ಯ: ರಾಜಧಾನಿಯಲ್ಲಿ ಮತ್ತೊಂದು ಬಲಿ

ಈ ಹಿನ್ನೆಲೆ ಗಿರಿನಗರ ಪೊಲೀಸರು ಸ್ಥಳಕ್ಕೆ ಭೇಟಿ‌ ನೀಡಿ ಪರಿಶೀಲನೆ ನಡೆಸಿದ್ದಾರೆ‌. ಈ ವೇಳೆ ಸ್ಥಳದಲ್ಲಿ ಡೆತ್ ನೋಟ್ ಸಹ ಪತ್ತೆಯಾಗಿದ್ದು, ನನ್ನ ಸಾವಿಗೆ ನಾನೇ ಕಾರಣ. ನನ್ನನ್ನು ಖುಷಿಯಾಗಿ ಕಳುಹಿಸಿಕೊಡಿ ಎಂದು ಸುಮಿತ್ರಾ ಬರೆದಿದ್ದಾರೆ‌. ಇನ್ನೂ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.

ABOUT THE AUTHOR

...view details