ಬೆಂಗಳೂರು: ಪ್ರಿಯಾಂಕ್ ಖರ್ಗೆ ಈ ಮೊದಲು ಬಿಡುಗಡೆ ಮಾಡಿದ್ದ ಆಡಿಯೊಗೇ ಇನ್ನೂ ಸ್ಪಷ್ಟನೆ ಕೊಟ್ಟಿಲ್ಲ. ಈಗ ಯಾವ ಆಡಿಯೋ ಬಿಡುಗಡೆ ಮಾಡಿದ್ದಾರೋ ಗೊತ್ತಿಲ್ಲ ಎಂದು ಸಿಎಂ ಬೊಮ್ಮಾಯಿ ತಿರುಗೇಟು ನೀಡಿದರು.
ಪ್ರಿಯಾಂಕ್ ಖರ್ಗೆ ಪಿಎಸ್ಐ ಪರೀಕ್ಷೆ ನೇಮಕಾತಿ ಹಗರಣ ಸಂಬಂಧ ಇಂದು ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಆಡಿಯೋ ಬಿಡುಗಡೆ ಮಾಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ ಬೊಮ್ಮಾಯಿ, ಈಗ ಅವರು ಯಾವ ಆಡಿಯೋ ಬಿಡುಗಡೆ ಮಾಡಿದ್ದಾರೋ ಗೊತ್ತಿಲ್ಲ. ಏನೇ ಆಡಿಯೋ ಇದ್ರೂ ಅದು ತನಿಖೆಗೆ ಒಳಪಡುತ್ತದೆ. ಆ ಆಡಿಯೋ ಸರಿ ಇದೆಯೋ ತಪ್ಪಿದ್ಯೋ ಎಂಬುದು ತನಿಖೆಯಲ್ಲಿ ಗೊತ್ತಾಗುತ್ತದೆ ಎಂದರು.