ಬೆಂಗಳೂರು :ಕೇರಳ ರಾಜ್ಯ ಈ ಸಾರಿ ಗಣರಾಜ್ಯೋತ್ಸವ ಪರೇಡ್ಗಾಗಿ ರೂಪಿಸಿದ್ದ ದಾರ್ಶನಿಕ ಶ್ರೀ ನಾರಾಯಣಗುರುಗಳ ಸ್ತಬ್ಧ ಚಿತ್ರ ಪ್ರದರ್ಶನವನ್ನು ಕೇಂದ್ರ ಸರ್ಕಾರ ತಿರಸ್ಕರಿಸಿರುವುದನ್ನು ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ತೀವ್ರವಾಗಿ ಖಂಡಿಸಿದ್ದಾರೆ.
ಟ್ವೀಟ್ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿರುವ ಅವರು, ಅಸ್ಪೃಶ್ಯತೆ, ಅಸಮಾನತೆಯನ್ನ ತೊಡೆದು ಹಾಕುವ ಆದರ್ಶಗಳನ್ನ ಪ್ರತಿಪಾದಿಸಿದ ಮಹಾನ್ ದಾರ್ಶನಿಕ ಶ್ರೀ ನಾರಾಯಣಗುರು ಅವರ ಸ್ತಬ್ಧ ಚಿತ್ರವನ್ನ ತಿರಸ್ಕರಿಸಿ ಕೇಂದ್ರ ಸರ್ಕಾರ ಈ ನೆಲದ ಅಸ್ಮಿತೆಗೆ ಅವಮಾನಿಸಿದೆ.
ಅವರ ಸಮಾನತೆಯ ತತ್ವಗಳ ಬಗ್ಗೆ ಅಸಡ್ಡೆಯೇ?. ಅವರ ಸಾಮಾಜಿಕ ಪರಿವರ್ತನೆಯ ಬಗ್ಗೆ ಅಸಹನೆಯೇ?. ಬಿಜೆಪಿ ತನ್ನ ಆಂತರ್ಯದ ಸತ್ಯ ಬಹಿರಂಗಪಡಿಸಲಿ ಎಂದಿದ್ದಾರೆ. ಇನ್ನೊಂದೆಡೆ ಕರ್ನಾಟಕ ರಾಜ್ಯ ಪ್ರಸ್ತಾಪ ಸಲ್ಲಿಸಿದ್ದ 'ಕರ್ನಾಟಕ ಪಾರಂಪರಿಕ ಕರಕುಶಲ ವಸ್ತುಗಳ ತೊಟ್ಟಿಲು' ಎಂಬ ವಿಷಯಾಧಾರಿತ ರಾಜ್ಯದ ಸ್ತಬ್ಧಚಿತ್ರ ಈ ಬಾರಿಯ ಗಣರಾಜ್ಯೋತ್ಸವ ದಿನಾಚರಣೆಗೆ ಆಯ್ಕೆಯಾಗಿದೆ.