ಕರ್ನಾಟಕ

karnataka

ETV Bharat / state

ನಾಳೆ ರಾಜ್ಯಕ್ಕೆ ಪ್ರಿಯಾಂಕ ಗಾಂಧಿ ಆಗಮನ; ಮೈಸೂರು ಜಿಲ್ಲೆಯಲ್ಲಿ ಭರ್ಜರಿ ಪ್ರಚಾರ - ಕಾಂಗ್ರೆಸ್​ ಚುನಾವಣಾ ಪ್ರಚಾರ

ಕಾಂಗ್ರೆಸ್​ನ ಸ್ಟಾರ್ ಪ್ರಚಾರಕಿ ಪ್ರಿಯಾಂಕಾ ಗಾಂಧಿ ನಾಳೆ ಮೈಸೂರಿಗೆ ಆಗಮಿಸಿ ಚುನಾವಣಾ ಪ್ರಚಾರ ಕೈಗೊಳ್ಳಲಿದ್ದಾರೆ. ​ ​​

ಪ್ರಿಯಾಂಕ ಗಾಂಧಿ
ಪ್ರಿಯಾಂಕ ಗಾಂಧಿ

By

Published : Apr 24, 2023, 12:27 PM IST

ಬೆಂಗಳೂರು: ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ರಾಜ್ಯದ ವಿವಿಧೆಡೆ ಎರಡು ದಿನಗಳಿಂದ ನಿರಂತರ ಪ್ರಚಾರ ಕೈಗೊಂಡಿರುವ ಬೆನ್ನಲ್ಲೇ ನಾಳೆ ರಾಜ್ಯ ಚುನಾವಣಾ ಅಖಾಡಕ್ಕೆ ಕಾಂಗ್ರೆಸ್​ನ ಸ್ಟಾರ್ ಪ್ರಚಾರಕಿ ಪ್ರಿಯಾಂಕಾ ಗಾಂಧಿ ಇಳಿಯಲಿದ್ದಾರೆ. ಅವರು ಮೈಸೂರು ಜಿಲ್ಲೆಗೆ ಆಗಮಿಸಿ ಚುನಾವಣಾ ಪ್ರಚಾರ ಕೈಗೊಳ್ಳಲಿದ್ದಾರೆ. ಮೈಸೂರು ಜಿಲ್ಲೆಯ ವಿವಿಧ ವಿಧಾನಸಭೆ ಕ್ಷೇತ್ರಗಳಲ್ಲಿ ನಡೆಯುವ ಸಾರ್ವಜನಿಕ ಸಭೆಗಳಲ್ಲಿ ಭಾಗವಹಿಸಲಿರುವ ಪ್ರಿಯಾಂಕಾ ಮಧ್ಯಾಹ್ನ 12 ರಿಂದ 1 ಗಂಟೆಗೆ ಟಿ.ನರಸೀಪುರ ಕ್ಷೇತ್ರದ ಹೆಳವರಹುಂಡಿಯಲ್ಲಿ ಸಾರ್ವಜನಿಕರ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಮಧ್ಯಾಹ್ನ 2.30ಕ್ಕೆ ಹನೂರು ಕ್ಷೇತ್ರಕ್ಕೆ ತೆರಳಿ, ಗೌರಿಶಂಕರ್ ಕನ್ವೆನ್ಷನ್ ಹಾಲ್‌ನಲ್ಲಿ ಮಧ್ಯಾಹ್ನ 3 ರಿಂದ 4 ಗಂಟೆಯವರೆಗೆ ಮಹಿಳೆಯರ ಜೊತೆ ಸಂವಾದ ನಡೆಸಲಿದ್ದಾರೆ. ರಾಹುಲ್ ಗಾಂಧಿ ವಿಜಯಪುರ ಜಿಲ್ಲೆಯಲ್ಲಿ ಪ್ರಚಾರ ಕಾರ್ಯ ನಡೆಸಿ ರಾತ್ರಿ ಅಲ್ಲೇ ತಂಗಿದ್ದ ಅವರು ಇಂದು ಬೆಳಿಗ್ಗೆ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಕೂಡಲಸಂಗಮ ದೇವಸ್ಥಾನ ಹಾಗೂ ಬಸವಣ್ಣನವರ ಐಕ್ಯ ಮಂಟಪ ದರ್ಶನ ಮಾಡಿ, ಬಸವ ಜಯಂತಿ ಕಾರ್ಯಕ್ರಮದಲ್ಲಿ ಅವರು ಭಾಗಿಯಾಗಿದ್ದರು. ಸಂಜೆ 4.25ಕ್ಕೆ ಹೆಲಿಕಾಪ್ಟರ್ ಮೂಲಕ ವಿಜಯಪುರಕ್ಕೆ ತೆರಳಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರ ಹಾಗೂ ರೋಡ ಶೋ ನಡೆಸಿದ್ದರು. ರಾತ್ರಿ ವಿಜಯಪುರದಲ್ಲಿ ವಾಸ್ತವ್ಯ ಕೂಡಿದ್ದ ರಾಹುಲ್ ಗಾಂಧಿ ಇಂದು ಬೆಳಿಗ್ಗೆ ದೆಹಲಿಗೆ ತೆರಳಿದ್ದಾರೆ.

ಇದನ್ನೂ ಓದಿ:ರಾಹುಲ್​ ಗಾಂಧಿ ಯುವಕರಿಗೆ ದೊಡ್ಡ ಶಕ್ತಿ; ಕಾಂಗ್ರೆಸ್​ ಅಭ್ಯರ್ಥಿ ಮಾನೆ

ಖರ್ಗೆ ಪ್ರಚಾರ:ಎಐಸಿಸಿ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಹ ಇಂದಿನಿಂದ ಎರಡು ದಿನಗಳಿಂದ ರಾಜ್ಯದಲ್ಲಿಯೇ ಬೀಡು ಬಿಡಲಿದ್ದು, ನಾಳೆ ಸಹ ತಮ್ಮ ಪ್ರವಾಸ ಮುಂದುವರಿಸಲಿದ್ದಾರೆ. ಇಂದು ಬೆಳಗ್ಗೆ ಚಿಕ್ಕಮಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಧ್ಯಾಹ್ನ ಚಿಕ್ಕಮಗಳೂರಿನ ಬೇಲೂರು ರಸ್ತೆಯ ಆಶ್ರಯ ಮೈದಾನದಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಮಧ್ಯಾಹ್ನ 3:30ಕ್ಕೆ ತರಿಕೆರೆಯ ಬೇಲೂರು ರಂಗ ಮಂದಿರದಲ್ಲಿ ನಡೆಯುವ ಸಾರ್ವಜನಿಕ ಸಭೆಯಲ್ಲಿ ಭಾಗಿಯಾಗಲಿದ್ದಾರೆ.

ಇದನ್ನೂ ಓದಿ:ಏ 27 ಕ್ಕೆ ಮಂಗಳೂರಿನಲ್ಲಿ ರಾಹುಲ್ ಗಾಂಧಿ ಚುನಾವಣಾ ಪ್ರಚಾರ ರೋಡ್ ಶೋ

ಇದನ್ನೂ ಓದಿ:ರಾಜ್ಯ ಬಿಜೆಪಿ ಸರ್ಕಾರ ದೇಶದಲ್ಲೇ ಅತ್ಯಂತ ಭ್ರಷ್ಟ ಸರ್ಕಾರ : ರಾಹುಲ್​ ಗಾಂಧಿ ವಾಗ್ದಾಳಿ

ಅಲ್ಲಿಂದ ಮಂಗಳೂರಿಗೆ ಪ್ರಯಾಣ ಬೆಳೆಸಿ ರಾತ್ರಿ ವಾಸ್ತವ್ಯ ಹೂಡಿ ನಾಳೆ ಬೆಳಗ್ಗೆ 10 ಗಂಟೆಗೆ ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಅದರ ತರುವಾಯ ಮಧ್ಯಾಹ್ನ 11 ಸುಳ್ಯದಲ್ಲಿ ಹಮ್ಮಿಕೊಂಡಿರುವ ಸಾರ್ವಜನಿಕ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಒಟ್ಟಾರೆ ರಾಜ್ಯ ವಿಧಾನಸಭೆ ಚುನಾವಣೆ ಮತದಾನ ದಿನಾಂಕ ಹತ್ತಿರವಾಗುತ್ತಿದ್ದಂತೆ ಪ್ರಚಾರದ ಭರಾಟೆ ಜೋರಾಗಿದ್ದು ಕಾಂಗ್ರೆಸ್ ರಾಷ್ಟ್ರೀಯ ನಾಯಕರು ಸಮರೋಪಾದಿಯಲ್ಲಿ ರಾಜ್ಯದತ್ತ ಆಗಮಿಸಿ ಪ್ರಚಾರ ಕಾರ್ಯದಲ್ಲಿ ತೊಡಗಿರುವುದು ಗಮನ ಸೆಳೆಯುತ್ತಿದೆ.

ಇದನ್ನೂ ಓದಿ:ವಿಜಯಪುರ: ಪಕ್ಷದ ಮುಖಂಡರೊಂದಿಗೆ ತಡರಾತ್ರಿ ಮಹತ್ವದ ಸಭೆ ನಡೆಸಿದ ರಾಹುಲ್​ ಗಾಂಧಿ

ABOUT THE AUTHOR

...view details