ಬೆಂಗಳೂರು : ಇದೇ ಮೊದಲ ಬಾರಿಗೆ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ನೇತೃತ್ವದ ವಿಭಾಗೀಯ ಪೀಠದಲ್ಲಿ ನ್ಯಾಯಾಲಯದ ಕಲಾಪ ನಡೆಯಲಿದೆ. ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದ ಮೇಲ್ಮನವಿಯ ವಿಶೇಷ ವಿಚಾರಣೆಯನ್ನು ಪೀಠ ವಿಚಾರಣೆ ನಡೆಸಲಿದೆ.
ರಾಜ್ಯದ 15 ಸಾವಿರ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಶಿಕ್ಷಣ ಇಲಾಖೆ ಪ್ರಕಟಿಸಿದ್ದ 1:1 ಅನುಪಾತದ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಹೈಕೋರ್ಟ್ ಏಕಸದಸ್ಯ ಪೀಠ ರದ್ದುಪಡಿಸಿತ್ತು. ಇದನ್ನು ಪ್ರಶ್ನಿಸಿ ಚಿಕ್ಕಬಳ್ಳಾಪುರದ ನರೇಂದ್ರ ಬಾಬು ಜಿ ವಿ ಮತ್ತು ಇತರರು ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಂ ಜಿ ಎಸ್ ಕಮಲ್ ಅವರ ನೇತೃತ್ವದ ವಿಭಾಗೀಯ ಪೀಠವು ನಾಳೆ (ಭಾನುವಾರ) ಬೆಳಗ್ಗೆ 11 ಗಂಟೆಗೆ ನಡೆಸಲಿದೆ.
ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ರದ್ದುಪಡಿಸಿದ್ದ ನ್ಯಾಯಾಲಯವು ಅಭ್ಯರ್ಥಿಗಳ ತಂದೆಯ ಆದಾಯ ಮತ್ತು ಜಾತಿ ಪ್ರಮಾಣ ಪತ್ರವನ್ನು ಪರಿಗಣಿಸಿ ಹೊಸದಾಗಿ ತಾತ್ಕಾಲಿಕ ಪಟ್ಟಿ ಸಿದ್ಧಪಡಿಸುವಂತೆ ರಾಜ್ಯ ಸರ್ಕಾರ ಹಾಗೂ ಶಿಕ್ಷಣ ಇಲಾಖೆಗೆ ನಿರ್ದೇಶಿಸಿ ಜನವರಿ 1ರಂದು ಆದೇಶಿಸಿತ್ತು. ಇದೀಗ ಇದನ್ನು ಸರ್ಕಾರ ಪ್ರಶ್ನಿಸಿದ್ದು ಭಾನುವಾರ ವಿಚಾರಣೆ ನಡೆಯಲಿದೆ.