ಬೆಂಗಳೂರು : ಹಲವು ಸಮಾಜಮುಖಿ ಕಾರ್ಯಗಳಲ್ಲಿ ಗುರುತಿಸಿಕೊಂಡಿರುವ ನಟ, ನಿರ್ಮಾಪಕ ಮಹೇಂದ್ರ ಮುನ್ನೋತ್ ನಗರದ ಪೌರ ಕಾರ್ಮಿಕರಿಗೆ ಆಹಾರ ಸಾಮಗ್ರಿಗಳ ಕಿಟ್ ವಿತರಿಸುವ ಮೂಲಕ ಸಹಾಯ ಮಾಡಿದ್ದಾರೆ.
ಪೌರ ಕಾರ್ಮಿಕರಿಗೆ ಆಹಾರ ಸಾಮಗ್ರಿ ವಿತರಿಸಿದ ನಿರ್ಮಾಪಕ ಮಹೇಂದ್ರ ಮುನ್ನೋತ್ - ಆಹಾರ ಸಾಮಗ್ರಿಗಳ ಕಿಟ್ ವಿತರಣೆ
ನಟ, ನಿರ್ಮಾಪಕ ಮಹೇಂದ್ರ ಮುನ್ನೋತ್ ಪೌರ ಕಾರ್ಮಿಕರಿಗೆ ಆಹಾರ ಸಾಮಗ್ರಿಗಳ ಕಿಟ್ ವಿತರಿಸಿದರು.
ಆಹಾರ ಸಾಮಗ್ರಿಗಳ ಕಿಟ್ ವಿತರಣೆ
ಬಹಳ ವರ್ಷಗಳಿಂದ ಮುನ್ನೋತ್ ಅವರು ಮಕ್ಕಳಿಗೆ ಪುಸ್ತಕ, ಸಮವಸ್ತ್ರ, ಆಟೋ ಚಾಲಕರಿಗೆ ಸಮವಸ್ತ್ರ ವಿತರಣೆ, ಗೋಶಾಲೆಗಳಿಗೆ ದೇಣಿಗೆ ನೀಡುವುದು ಸೇರಿದಂತೆ ಹಲವು ಸಮಾಜಮುಖಿ ಕಾರ್ಯಗಳನ್ನು ಮಾಡಿಕೊಂಡು ಬರುತ್ತಿದ್ದಾರೆ.
ಕಳೆದ ವರ್ಷ ಕೊರೊನಾ ಸಂದರ್ಭದಲ್ಲಿ ಕೊರೊನಾ ಜಾಗೃತಿ ಹಾಡು ನಿರ್ಮಿಸುವ ಮೂಲಕ ಮುನ್ನೋತ್ ಅವರು ಗಮನ ಸೆಳೆದಿದ್ದರು. ಪ್ರತಿ ದಿನ ಸುಮಾರು ಮೂರು ಸಾವಿರ ಜನರಿಗೆ ಆಹಾರ ವಿತರಿಸುವ ಕಾರ್ಯವನ್ನು ಮಹೇಂದ್ರ ಮುನ್ನೋತ್ ಮಾಡುತ್ತಿದ್ದಾರೆ. ಸ್ಲಂ, ಜೋಪಡಿಗಳಿಗೆ ತೆರಳಿ ಬಡ ಜನರಿಗೆ ಆಹಾರ ವಿತರಿಸುವ ಕಾರ್ಯ ಮಾಡುತ್ತಿದ್ದಾರೆ.