ಬೆಂಗಳೂರು: ಗೌರಿ ಗಣೇಶ ಹಬ್ಬದ ನಡುವೆ ಜನರಿಗೆ ಬೆಲೆ ಏರಿಕೆ ಶಾಕ್ ಎದುರಾಗಿದೆ. ಒಂದೂವರೆ ವರ್ಷದಿಂದ ಹಬ್ಬಗಳಿಗೆ ಬ್ರೇಕ್ ಹಾಕಿದ್ದ ರಾಜ್ಯ ಸರ್ಕಾರ, ಇದೀಗ ಹಬ್ಬ ಆಚರಣೆ ಮಾಡಲು ಅನುಮತಿ ನೀಡಿದೆ. ಈ ಹಿನ್ನೆಲೆಯಲ್ಲಿ ಹಣ್ಣು, ಹೂವಿನ ಬೆಲೆ ಗಗನಕ್ಕೇರಿರುವುದು ಜನತೆಯ ನಿದ್ದೆಗೆಡಿಸಿದೆ.
ಇಂದು ಕೆ.ಆರ್ ಮಾರ್ಕೆಟ್ನಲ್ಲಿ ಹೂ, ಹಣ್ಣು ಖರೀದಿ ವ್ಯಾಪಾರ ಜೋರಾಗಿದೆ. ಕಳೆದ ವಾರದ ಬೆಲೆಗಿಂತ ಈಗಿನ ಬೆಲೆ ದುಪ್ಪಟ್ಟಾಗಿದೆ ಎಂದು ಜನರು ಹೇಳುತ್ತಿದ್ದಾರೆ.