ಬೆಂಗಳೂರು: ಮೂಲಸೌಲಭ್ಯ ಅಭಿವೃದ್ಧಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯು, ಸಿಎಂ ಬಿ.ಎಸ್. ಯಡಿಯೂರಪ್ಪನವರ ಗೃಹಕಚೇರಿ ಕೃಷ್ಣಾದಲ್ಲಿ ನಡೆಯಿತು. ಸಭೆಯಲ್ಲಿ ಬೆಂಗಳೂರು ಸಬ್ ಅರ್ಬನ್ ರೈಲು ಯೋಜನೆಗೆ ಕೇಂದ್ರದ ಮಂಜೂರಾತಿ ಪಡೆಯಲು ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಬಿಎಸ್ವೈ ಸೂಚಿಸಿದರು. ಜೊತೆಗೆ ಹಾಸನ - ಮಂಗಳೂರು ರೈಲು ಅಭಿವೃದ್ಧಿ ಕಂಪನಿ, ಕಡಚಿ-ಬಾಗಲಕೋಟೆ ರೈಲ್ವೆ ಯೋಜನೆಯ ಅನುಷ್ಠಾನದ ಅಡಚಣೆ ಬಗೆಹರಿಸಲು ಸೂಚಿಸಿದರು.
ಸಿಎಂ ನೇತೃತ್ವದಲ್ಲಿ ಮೂಲಸೌಲಭ್ಯ ಅಭಿವೃದ್ಧಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ - ಸಿಎಂ ಬಿ.ಎಸ್. ಯಡಿಯೂರಪ್ಪ
ಸಿಎಂ ಬಿ.ಎಸ್. ಯಡಿಯೂರಪ್ಪನವರ ಗೃಹಕಚೇರಿ ಕೃಷ್ಣಾದಲ್ಲಿ, ಮೂಲಸೌಲಭ್ಯ ಅಭಿವೃದ್ಧಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಸಭೆಯಲ್ಲಿ ಬೆಂಗಳೂರು ಸಬ್ ಅರ್ಬನ್ ರೈಲು ಯೋಜನೆಗೆ ಕೇಂದ್ರದ ಮಂಜೂರಾತಿ ಪಡೆಯಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಬಿಎಸ್ವೈ ಸೂಚಿಸಿದರು.
ಕೊರೊನಾ ಹಿನ್ನೆಲೆ ಪಿಪಿಪಿ (ಸಾರ್ವಜನಿಕ –ಖಾಸಗಿ ಸಹಭಾಗಿತ್ವದಲ್ಲಿ) ಕೃಷಿ, ಶಿಕ್ಷಣ ಸೇರಿದಂತೆ 14 ವಲಯಗಳಲ್ಲಿ ಯೋಜನೆ ಕೈಗೊಳ್ಳಲು ಆದ್ಯತೆ ನೀಡಿದೆ. ಈಗಾಗಲೇ 500 ಕೋಟಿ ರೂ. ಮೌಲ್ಯದ ಯೋಜನೆಗೆ ಅನುಮತಿ ನೀಡಿದ್ದು, ಇತರೆಡೆ ಯೋಜನೆ ಕೈಗೆತ್ತಿಕೊಳ್ಳುವಂತೆ ಸೂಚಿಸಿದರು.
ವಿಮಾನ ನಿಲ್ದಾಣ ಅಭಿವೃದ್ಧಿ, ಬೆಂಗಳೂರು ಸಿಗ್ನೇಚರ್ ಬ್ಯುಸಿನೆಸ್ ಪಾರ್ಕ್ ಯೋಜನೆ ತ್ವರಿತಗೊಳಿಸುವಂತೆ ಸೂಚಿಸಿದರು. ಶಿವಮೊಗ್ಗ ರಾಣೆಬೆನ್ನೂರು ಮಾರ್ಗದಲ್ಲಿ ಭೂಸ್ವಾಧೀನ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ರೈಲ್ವೆ ಯೋಜನೆಗಳು ಪ್ರಗತಿಯಲ್ಲಿವೆ ಎಂದು ಅಧಿಕಾರಿಗಳು ತಿಳಿಸಿದರು. ಶಾಸಕ ಎಸ್.ಆರ್. ವಿಶ್ವನಾಥ್, ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಸೇರಿದಂತೆ ಅಧಿಕಾರಿಗಳು ಭಾಗಿಯಾಗಿದ್ದರು.
TAGGED:
ಸಿಎಂ ಬಿ.ಎಸ್. ಯಡಿಯೂರಪ್ಪ