ಬೆಂಗಳೂರು:ವಿಧಾನಮಂಡಲ ಅಧಿವೇಶನವು ಅ. 10ರಿಂದ 12ರವರೆಗೆ ವಿಧಾನಸೌಧಲ್ಲಿ ನಡೆಯಲಿದ್ದು, ಈ ವೇಳೆ ಯಾವುದೇ ಅಹಿತಕರ ಘಟನೆ ಜರುಗದಂತೆ ಕ್ರಮ ಕೈಗೊಳ್ಳಲು ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ವಿಧಾನಸೌಧದ ಸುತ್ತಮುತ್ತ 2 ಕಿ.ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ.
ವಿಧಾನಮಂಡಲ ಅಧಿವೇಶನ: ವಿಧಾನಸೌಧ ಸುತ್ತಮುತ್ತ ನಿಷೇಧಾಜ್ಞೆ ಜಾರಿ - ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್
ವಿಧಾನಮಂಡಲ ಅಧಿವೇಶನವು ಅ.10ರಿಂದ 12ರವರೆಗೆ ವಿಧಾನಸೌಧಲ್ಲಿ ನಡೆಯಲಿದ್ದು, ಈ ವೇಳೆ ಯಾವುದೇ ಅಹಿತಕರ ಘಟನೆ ಜರುಗದಂತೆ ಕ್ರಮ ಕೈಗೊಳ್ಳಲು ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ವಿಧಾನಸೌಧದ ಸುತ್ತಮುತ್ತ 2 ಕಿ.ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ.
ವಿಧಾನಸೌಧ ಸುತ್ತಮುತ್ತ ನಿಷೇಧಾಜ್ಞೆ
ಅಧಿವೇಶನ ನಡೆಯುವ ವೇಳೆ ಅಂದರೆ ಅ. 10ರಂದು ಬೆಳಗ್ಗೆ 6ರಿಂದ ಅ. 12ರ ಮಧ್ಯರಾತ್ರಿ 12 ಗಂಟೆವರೆಗೆ ವಿವಿಧ ರಾಜಕೀಯ ಪಕ್ಷಗಳು, ವಿವಿಧ ಸಂಘಟನೆಗಳು ತಮ್ಮ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ, ಮೆರವಣಿಗೆ, ವಿಧಾನಸೌಧ ಮುತ್ತಿಗೆ ಇತ್ಯಾದಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಸಾಧ್ಯತೆಯಿದೆ.
ಈ ಹಿನ್ನೆಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಕಲಂ 144 ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಆದೇಶ ಹೊರಡಿಸಿದ್ದಾರೆ.