ಕರ್ನಾಟಕ

karnataka

ETV Bharat / state

ನಾಳೆ ಸಿಇಟಿ: ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ ಜಾರಿ

ಸಿಇಟಿ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶಿಸಲಾಗಿದೆ.

Prohibitory orders enforced  CET examination centres  Prohibitory orders enforced around CET examination  ಶನಿವಾರ ಸಿಇಟಿ ಪರೀಕ್ಷೆ  ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ ಜಾರಿ  ಶನಿವಾರದಿಂದ ಸಿಇಟಿ ಪರೀಕ್ಷೆ ಆರಂಭ  ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ  ಶನಿವಾರ ರಾಜ್ಯದ ನೂತನ ಸಿಎಂ ಪದಗ್ರಹಣ  ಕರ್ನಾಟಕ ಪರೀಕ್ಷಾ ಪ್ರಾಧಿಕಾರ  ವೃತ್ತಿಪರ ಕೋರ್ಸ್‌ಗಳ ಪ್ರವೇಶ  ಸಾಮಾನ್ಯ ಪ್ರವೇಶ ಪರೀಕ್ಷೆ
ಶನಿವಾರ ಸಿಇಟಿ ಎಕ್ಸಾಂ

By

Published : May 19, 2023, 12:48 PM IST

ಬೆಂಗಳೂರು :ನಾಳೆ (ಶನಿವಾರ) ಬೆಂಗಳೂರಿನಲ್ಲಿ ರಾಜ್ಯದ ನೂತನ ಸಿಎಂ ಪದಗ್ರಹಣ ಕಾರ್ಯಕ್ರಮವಿದೆ. ಇದರ ಜೊತೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ನಡೆಸಲಿದೆ. ಮೇ 20, 21ರಂದು ಪರೀಕ್ಷೆ ನಡೆಯಲಿದ್ದು ಸುಗಮ, ಸುವ್ಯವಸ್ಥಿತ ಪರೀಕ್ಷಾ ಪ್ರಕ್ರಿಯೆಗೆ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶದಲ್ಲಿ ನಿಷೇಧಾಜ್ಞೆ ಘೋಷಿಸಿ ಸಂಚಾರ ವಿಭಾಗದ ವಿಶೇಷ ಆಯುಕ್ತ ಎಂ.ಎ.ಸಲೀಂ ಆದೇಶಿಸಿದ್ದಾರೆ.

ಇದನ್ನೂ ಓದಿ:ಸಚಿವ ಸಂಪುಟ ರಚನೆ: ಆಕಾಂಕ್ಷಿಗಳ ಪಟ್ಟಿಯೊಂದಿಗೆ ಸಿದ್ದರಾಮಯ್ಯ, ಡಿಕೆಶಿ ಇಂದು ದೆಹಲಿಗೆ

ಸಿಇಟಿ 2023:ಪರೀಕ್ಷೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಮಾರ್ಚ್​ 2 ರಂದು ಬೆಳಗ್ಗೆ 11 ರಿಂದ ಅವಕಾಶ ಕಲ್ಪಿಸಲಾಗಿತ್ತು. ಆನ್‌ಲೈನ್ ಅರ್ಜಿ ಸಲ್ಲಿಕೆಗೆ ಏಪ್ರಿಲ್​ 5 ಮತ್ತು ಅರ್ಜಿ ಶುಲ್ಕ ಪಾವತಿಸಲು ಏ 7 ಕೊನೆಯ ದಿನವಾಗಿತ್ತು.

ಮೇ 20 ರಂದು ಬೆಳಿಗ್ಗೆ 10.30 ರಿಂದ 11.50 ರವರೆಗೆ ಜೀವಶಾಸ್ತ್ರ, ಮಧ್ಯಾಹ್ನ 2.30 ರಿಂದ 3.50 ರವರೆಗೆ ಗಣಿತಶಾಸ್ತ್ರ ಪರೀಕ್ಷೆ ತಲಾ 60 ಅಂಕಗಳಿಗೆ ನಡೆಯಲಿದೆ. ಮೇ 21ರಂದು ಬೆಳಿಗ್ಗೆ 10.30ರಿಂದ 11.50 ರವರೆಗೆ ಭೌತಶಾಸ್ತ್ರ ಪರೀಕ್ಷೆ ನಡೆಯಲಿದೆ. ಮಧ್ಯಾಹ್ನ 2.30 ರಿಂದ 3.50 ರವರೆಗೆ ರಸಾಯನಶಾಸ್ತ್ರ ಪರೀಕ್ಷೆ ನಿಗದಿಯಾಗಿದೆ.

ಕನ್ನಡ ಭಾಷಾ ಪರೀಕ್ಷೆ : ಬೆಂಗಳೂರು, ಬೀದರ್, ಬೆಳಗಾವಿ, ಬಳ್ಳಾರಿ, ವಿಜಯಪುರ, ಮಂಗಳೂರು ಜಿಲ್ಲಾ ಕೇಂದ್ರಗಳಲ್ಲಿ ಮಾತ್ರ ಕನ್ನಡ ಭಾಷಾ ಪರೀಕ್ಷೆ ನಡೆಯಲಿದೆ. ಮೇ 22 ರಂದು ಬೆಳಿಗ್ಗೆ 11.30 ರಿಂದ 12.30 ರವರೆಗೆ ಹೊರನಾಡು ಮತ್ತು ಗಡಿನಾಡು ಕನ್ನಡ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯಲಿದೆ ಎಂದು ಈಗಾಗಲೇ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ:ನಾಳೆ ನೂತನ ಮುಖ್ಯಮಂತ್ರಿಗಳ ಪ್ರಮಾಣವಚನ: ಕಂಠೀರವ ಸ್ಟೇಡಿಯಂ ಸುತ್ತ ಬಿಗಿ ಭದ್ರತೆ

ABOUT THE AUTHOR

...view details