ಕರ್ನಾಟಕ

karnataka

ETV Bharat / state

ಪದವಿಪೂರ್ವ ಶಿಕ್ಷಣ ಇಲಾಖೆಯ 95 ಉಪನ್ಯಾಸಕರಿಗೆ ಪ್ರಾಂಶುಪಾಲರ‌ ಹುದ್ದೆಗೆ ಬಡ್ತಿ! - bangalore news

ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಉಪನ್ಯಾಸಕರಿಗೆ ರೂ. 56800- 99600 ರ ವೇತನ ಶ್ರೇಣಿ ಪ್ರಾಂಶುಪಾಲರ ಹುದ್ದೆಗಳಿಗೆ ಸ್ಥಾನಪನ್ನ ಬಡ್ತಿಯನ್ನು ನೀಡಿ ಆದೇಶ.

promoted-to-the-post-of-principal-of-lecturers
promoted-to-the-post-of-principal-of-lecturers

By

Published : Jan 13, 2020, 11:41 PM IST

ಬೆಂಗಳೂರು: ಪದವಿಪೂರ್ವ ಶಿಕ್ಷಣ ಇಲಾಖೆಯ 95 ಉಪನ್ಯಾಸಕರಿಗೆ ಪ್ರಾಂಶುಪಾಲರ‌ ಹುದ್ದೆಗೆ ಬಡ್ತಿ ನೀಡಲಾಗಿದೆ. ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಉಪನ್ಯಾಸಕರಿಗೆ ರೂ. 56800- 99600 ರ ವೇತನ ಶ್ರೇಣಿ ಪ್ರಾಂಶುಪಾಲರ ಹುದ್ದೆಗಳಿಗೆ ಸ್ಥಾನಪನ್ನ ಬಡ್ತಿಯನ್ನು ನೀಡಿ ಆದೇಶಿಸಲಾಗಿದೆ. ಕೌನ್ಸಿಲಿಂಗ್ ಮೂಲಕ ಸ್ಥಳ ನಿಯುಕ್ತಿಯನ್ನು ಮಾಡಲು ಸೂಚಿಸಲಾಗಿದೆ.

ಪ್ರಾಂಶುಪಾಲರ ಹುದ್ದೆಗಳಿಗೆ ಸ್ಥಾನಪನ್ನ ಬಡ್ತಿ

ಇನ್ನು ಕೌನ್ಸಿಲಿಂಗ್ ಮೂಲಕ ಪ್ರಾಂಶುಪಾಲರುಗಳು ಸ್ಥಳ ನಿಯುಕ್ತಿಗೊಂಡಿರುವ ಆದೇಶ ಹೊರಡಿಸಿದ 07 ದಿನಗಳೊಳಗಾಗಿ ಕರ್ತವ್ಯದಿಂದ ಬಿಡುಗಡೆಯಾಗಿ ಸಕಾಲದಲ್ಲಿ ಸ್ಥಳ ಆಯ್ಕೆ ಮಾಡಿಕೊಂಡ ಸ್ಥಳದಲ್ಲಿ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳುತಕ್ಕದ್ದು ಹಾಗೂ ಕೌನ್ಸಿಲಿಂಗ್ ಮೂಲಕ ಸ್ಥಳ ಆಯ್ಕೆ ಮಾಡಿ ಕೊಂಡ ಪ್ರಾಂಶುಪಾಲರು ಕರ್ತವ್ಯಕ್ಕೆ ಹಾಜರಾದ ಬಗ್ಗೆ ವರದಿಯನ್ನು ಸಂಬಂಧಪಟ್ಟ ಬಡ್ತಿ ಆದೇಶದಲ್ಲಿನ ಕ್ರಮ ಸಂಖ್ಯೆಯೊಂದಿಗೆ ಅಂಚೆ ಮೂಲಕ ಒಂದು ವಾರದೊಳಗೆ ಕಳುಹಿಸುವಂತೆ ಸೂಚಿಸಲಾಗಿದೆ.

ಪ್ರಾಂಶುಪಾಲರ ಹುದ್ದೆಗಳಿಗೆ ಸ್ಥಾನಪನ್ನ ಬಡ್ತಿ

ಇನ್ನು ಕೌನ್ಸಿಲಿಂಗ್ ಮೂಲಕ ಸ್ಥಳ ಆಯ್ಕೆ ಮಾಡಿಕೊಂಡ ಪ್ರಾಂಶುಪಾಲರ ಹುದ್ದೆಯಲ್ಲಿ ನಿಗಧಿತ ಅವಧಿಯಲ್ಲಿ ಕರ್ತವ್ಯಕ್ಕೆ ಹಾಜರಾಗದಿದ್ದಲ್ಲಿ ಅಂತಹವರ ವಿರುದ್ಧ ಶಿಸ್ತು ಕ್ರಮವನ್ನು ಜರುಗಿಸಲಾಗುವುದೆಂದು‌ ಸೂಚನೆ ನೀಡಲಾಗಿದೆ.. ಕೌನ್ಸಿಲಿಂಗ್ ಪ್ರಕ್ರಿಯೆಯಲ್ಲಿ ಭಾಗಿಯಾಗಿ ಸ್ಥಳ ಆಯ್ಕೆ ಮಾಡಿಕೊಳ್ಳದ ಮತ್ತು ಗೈರು ಹಾಜರಿ ಉಪನ್ಯಾಸಕರಿಗೆ ಸ್ಥಳ ನಿಯುಕ್ತಿಯನ್ನು ಕೌನ್ಸಿಲಿಂಗ್ ಪ್ರಕ್ರಿಯೆ ನಂತರ ಖಾಲಿ ಉಳಿದ ಸ್ಥಳಗಳಿಗೆ ಸ್ಥಳ ನಿಯುಕ್ತಿಮಾಡಿ, ಬಡ್ತಿ ಅವಕಾಶವನ್ನು ಉಪಯೋಗಿಸಿಕೊಳ್ಳಲು ಅವಕಾಶ ಮಾಡಿಕೊಡಲಾಗಿದೆ.

ಕೌನ್ಸೆಲಿಂಗ್ ಪ್ರಕ್ರಿಯೆಯಲ್ಲಿ ಭಾಗವಹಿಸಿ, ಸ್ಥಳ ಆಯ್ಕೆ ಮಾಡಿಕೊಳ್ಳದೇ, ಬಡ್ತಿ ಮುಂದೂಡಿರುವ (Fore go) ಬಗ್ಗೆ ಉಪನ್ಯಾಸಕರುಗಳ ಸೇವಾ ಪುಸ್ತಕದಲ್ಲಿ ನಮೂದಿಸಿ, ಅದರ ಒಂದು ನಕಲು ಪ್ರತಿಯನ್ನು ಕೇಂದ್ರ ಕಚೇರಿ ಸಲ್ಲಿಸುವಂತೆ ತಿಳಿಸಲಾಗಿದೆ..

ABOUT THE AUTHOR

...view details