ಬೆಂಗಳೂರು :ಇಬ್ಬರು ಹಿರಿಯ ಐಎಎಸ್ ಅಧಿಕಾರಿಗಳಿಗೆ ಭಡ್ತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಇಬ್ಬರು ಹಿರಿಯ ಐಎಎಸ್ ಅಧಿಕಾರಿಗಳಿಗೆ ಬಡ್ತಿ.. - kannada news
ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ. ಬಿ ಬಸವರಾಜು ಅವರಿಗೆ ಬಡ್ತಿ ನೀಡಲಾಗಿದೆ. ಅವರನ್ನ ಅರಣ್ಯ, ಜೀವ ಮತ್ತು ಪರಿಸರ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸ್ಥಾನಕ್ಕೆ ನಿಯುಕ್ತಿಗೊಳಿಸಲಾಗಿದೆ. ಜತೆಗೆ ಮೂಲ ಸೌಕರ್ಯಗಳ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಆಗಿ ಜವಾಬ್ದಾರಿ ನೀಡಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಆದೇಶ ಹೊರಡಿಸಲಾಗಿದೆ.

ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ.ರಾಜ್‌ಕುಮಾರ್ ಖತ್ರಿ ಅವರಿಗೆ ಬಡ್ತಿ ನೀಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸ್ಥಾನಕ್ಕೆ ನಿಯುಕ್ತಿಗೊಳಿಸಿದ್ದು ಹೆಚ್ಚುವರಿಯಾಗಿ ಕಂದಾಯ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜವಾಬ್ದಾರಿಯನ್ನೂ ನೀಡಲಾಗಿದೆ.
ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ. ಬಿ ಬಸವರಾಜು ಅವರಿಗೆ ಬಡ್ತಿ ನೀಡಿ ಅರಣ್ಯ, ಜೀವ ಮತ್ತು ಪರಿಸರ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸ್ಥಾನಕ್ಕೆ ನಿಯುಕ್ತಿಗೊಳಿಸಲಾಗಿದೆ. ಇದರ ಜತೆಗೆ ಮೂಲ ಸೌಕರ್ಯಗಳ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಆಗಿ ಜವಾಬ್ದಾರಿ ನೀಡಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಆದೇಶ ಹೊರಡಿಸಲಾಗಿದೆ.