ಬೆಂಗಳೂರು:ಎರಡನೇ ಶನಿವಾರ ಮತ್ತು ನಾಲ್ಕನೇ ಶನಿವಾರ ರಜಾ ದಿನವನ್ನಾಗಿ ರಾಜ್ಯ ಸರ್ಕಾರ ಘೋಷಿಸಿದೆ. ಈ ನಿಯಮ ಶಾಲಾ ಶಿಕ್ಷಕರಿಗೆ ಅನ್ವಯವಾಗಿಲ್ಲ. ಆದ್ರೆ ಅವರ ವಾರ್ಷಿಕ 15 ಸಾಂದರ್ಭಿಕ ರಜೆಗಳನ್ನು ಮಾತ್ರ 10 ದಿನಕ್ಕೆ ಇಳಿಕೆ ಮಾಡಲಾಗಿದೆ. ಹಾಗಾಗಿ ಇದನ್ನು 15 ದಿನಕ್ಕೆ ಮಾಡುವಂತೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸಿಎಂಗೆ ಪ್ರಸ್ತಾವನೆ ಕಳುಹಿಸಿದ್ದಾರೆ.
ತಿಂಗಳ ಎರಡನೇ ಶನಿವಾರ ಮತ್ತು ನಾಲ್ಕನೇ ಶನಿವಾರವನ್ನು ರಜಾ ದಿನವನ್ನಾಗಿ ರಾಜ್ಯ ಸರ್ಕಾರ ಘೋಷಿಸಿದೆ. ನಾಲ್ಕನೇ ಶನಿವಾರವನ್ನು ರಜಾ ದಿನವನ್ನಾಗಿ ಘೋಷಿಸಿದ ಸಂದರ್ಭದಲ್ಲಿ ಸರ್ಕಾರಿ ನೌಕರರ ವಾರ್ಷಿಕ 15 ಸಾಂದರ್ಭಿಕ ರಜೆಗಳನ್ನು 10 ದಿನಗಳಿಗೆ ಇಳಿಕೆ ಮಾಡಲಾಗಿತ್ತು. ಇತರೆ ಸರ್ಕಾರಿ ನೌಕರರಂತೆಯೇ ಅದು ಶಾಲಾ ಶಿಕ್ಷಕ ಸಮುದಾಯಕ್ಕೂ ಅನ್ವಯವಾಗಿದೆ.